ಗಂಡ ಆದಾಯ ತೆರಿಗೆ ಪಾವತಿಸಿದ್ರೆ ಹೆಂಡತಿಗಿಲ್ಲ 2000 ರೂಪಾಯಿ : ಗೃಹಲಕ್ಷ್ಮೀ ಯೋಜನೆಗೆ ಹೊಸ ಕಂಡಿಷನ್‌

ಬೆಂಗಳೂರು : Gruhalakshmi Yojana Guidelines: ರಾಜ್ಯದ ಕಾಂಗ್ರೆಸ್‌ ಸರಕಾರ ಚುನಾವಣೆಯ ಹೊತ್ತಲ್ಲಿ ನೀಡಿರುವ ಭರವಸೆಯ ಈಡೇರಿಗೆ ಮುಂದಾಗಿದೆ. ಆದರೆ ಐದು ಗ್ಯಾರಂಟಿಗಳಿಗೂ ಒಂದೊಂದು ಕಂಡಿಷನ್ಸ ಹಾಕುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಹಿಂದೆ ಮನೆಯ ಯಜಮಾನಿಯಾದವರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದ್ರೆ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಅಧಿಕೃತ ಮಾರ್ಗಸೂಚಿ ಯನ್ನು ಪ್ರಕಟಿಸಿದ್ದು, ಮನೆಯ ಯಜಮಾನಿ ಅಥವಾ ಆಕೆಯ ಗಂಡ ಆದಾಯ ತೆರಿಗೆ ಪಾವತಿ ಮಾಡಿದ್ದರೆ, ಇಲ್ಲಾ ಜಿಎಸ್‌ಟಿ ಪಾವತಿದಾರರಾಗಿದ್ದರೆ ಅಂತಹ ಯಜಮಾನಿಗೆ ತಿಂಗಳಿಗೆ 2000 ರೂಪಾಯಿ ಪಡೆಯಲು ಸಾಧ್ಯವಿಲ್ಲ ಎಂದಿದೆ. ಅಲ್ಲದೇ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೂಡ ಈ ಯೋಜನೆ ಸಿಗುವುದಿಲ್ಲ. ಬದಲಾಗಿ ಅರ್ಜಿ ಸಲ್ಲಿಸಿದ ನಂತರದಲ್ಲಿ ರಾಜ್ಯ ಸರಕಾರವೇ ಫಲಾನುಭವಿಗಳನ್ನು ಆಯ್ಕೆ ಮಾಡಲಿದೆ.

ಮೇ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿತ್ತು. ಈ ಯೋಜನೆಯ ಮೂಲಕ ಮನೆಯ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಈ ಕುರಿತು ಆರ್ಥಿಕ ಇಲಾಖೆ ಹಾಗೂ ಯೋಜನಾ ಇಲಾಖೆಗಳ ಜೊತೆಗೆ ಚರ್ಚಿಸಿರುವ ಸರಕಾರ ಸಂಪುಟ ಸಭೆಯಲ್ಲಿ ಯೋಜನೆ ಕುರಿತು ಹಲವು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ರಾಜ್ಯ ಸರಕಾರ ಪ್ರಕಟಿಸಿರುವ ಮಾರ್ಗಸೂಚಿ ಹಲವು ಗೊಂದಲಗಳನ್ನು ಹುಟ್ಟುಹಾಕಿದೆ. ಪ್ರಮುಖವಾಗಿ ಚುನಾವಣೆಯ ಹೊತ್ತಲ್ಲಿ, ಅಥವಾ ನಂತರದಲ್ಲಿಯೂ ಸರಕಾರ ಯಾವುದೇ ನಿಮಯ ಹೇರಿಕೆ ಮಾಡುವುದಿಲ್ಲ ಎಂದು ಹೇಳಿತ್ತು. ಆದರೆ ಇದೀಗ ರಾಜ್ಯ ಸರಕಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆ ಲಾಭ ಇಲ್ಲ ಎಂದು ಹೇಳಿದೆ. ವಾಹನ, ಮನೆ ಸಾಲಕ್ಕೆ ಆದಾಯ ತೆರಿಗೆ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸಾಕಷ್ಟು ಬಡವರು, ಮಧ್ಯಮ ವರ್ಗದವರು ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬಂದಿವೆ.

Gruhalakshmi Yojana Guidelines : ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿಯಲ್ಲೇನಿದೆ ?

  • ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆ ಅರ್ಹ ಫಲಾನುಭವಿಯಾಗಿರುತ್ತಾರೆ.
  • ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರವೇ ಈ ಯೋಜನೆ ಅನ್ವಯವಾಗಲಿದೆ.
  • ಈ ಯೋಜನೆಯ ಫಲಾನುಭವಿಗಳು 2023 ಜೂನ್‌ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸುವುದು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಅಗಸ್ಟ್‌ 15ರಂದು ಅವರ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ಜಮೆ ಮಾಡಲಾಗುತ್ತದೆ.
  • ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಬೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸತಕ್ಕದ್ದು.
  • ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆಯ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರದ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡು ಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು. ಅಲ್ಲದೇ ಅಂತಹವರ ವಿರುದ್ದ ಸೂಕ್ತ ಕ್ರಮವನ್ನು ಕೈಗೊಳ್ಳಲಾಗತ್ತದೆ.

ಇದನ್ನೂ ಓದಿ : Karnataka Grilahakshmi Yojana : ಕರ್ನಾಟಕ ಗೃಹಲಕ್ಷ್ಮಿ ಯೋಜನೆ : ಈ ಯೋಜನೆಗೆ ಬ್ಯಾಂಕ್‌ ಖಾತೆಗೆ ಆಧಾರ್ ಕಾರ್ಡ್ ಲಿಂಕ್‌ ಕಡ್ಡಾಯ

ಇದನ್ನೂ ಓದಿ : MP GS Basavaraju retirement : ತುಮಕೂರು ಸಂಸದ ಜಿಎಸ್ ಬಸವರಾಜ್‌ ನಿವೃತ್ತಿ, ಲೋಕಸಭೆಗೆ ಸ್ಪರ್ಧಿಸ್ತಾರಾ ವಿ.ಸೋಮಣ್ಣ

ಈ ಕಳಗಿನವರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗಲ್ಲ

  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ಪಾವತಿ ಸಲ್ಲಿಸುವವರಾಗಿದ್ದಲ್ಲಿ.

Gruhalakshmi Yojana Guidelines Release income Tax payers Not get 2000 rs

Comments are closed.