Gulihatti D Shekar : ಬಿಜೆಪಿ ತೊರೆದು ಗೂಳಿಹಟ್ಟಿ ಶೇಖರ್‌ ಕೆಆರ್‌ಪಿಪಿಯಿಂದ ಸ್ಪರ್ಧೆ

ಹೊಸದುರ್ಗ : ಶಾಸಕ ಗೂಳಿಹಟ್ಟಿ ಶೇಖರ್‌ಗೆ (Gulihatti D Shekar ) ಈ ಬಾರಿ ಬಿಜೆಪಿ ಟಿಕೆಟ್‌ ಕೈತಪ್ಪಿಗೆ ಹೀಗಾಗಿ ಪಕ್ಷದ ಮೇಲೆ ಮುನಿಸಿಕೊಂಡಿರುವ ಗೂಳಿಹಟ್ಟಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆಯಲ್ಲಿ ಜನಾರ್ಧನ ರೆಡ್ಡಿ ಜೊತೆಗೆ ಮಾತುಕತೆ ನಡೆಸಿದ್ದು, ಕೆಆರ್‌ಪಿಪಿ ಪಾರ್ಟಿಯಿಂದಲೂ ಕಣಕ್ಕಿಳಿಯುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಬಿಜೆಪಿ ಹಲವು ಕ್ಷೇತ್ರಗಳಿಗೆ ಹೊಸಮುಖಗಳನ್ನು ಪರಿಚಯಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹೊಸದುರ್ಗದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದಲ್ಲಿನ ಆತಂರಿಕ ಕಲಹದಿಂದಾಗಿ ಗೂಳಿಹಟ್ಟಿ ಶೇಖರ್‌ ಅವರಿಗೆ ಈ ಬಾರಿ ಟಿಕೆಟ್‌ ಕೈತಪ್ಪಿದೆ. ಹೈಕಮಾಂಡ್‌ ನಿರ್ಧಾರದ ಕುರಿತು ಗೂಳಿಹಟ್ಟಿ ಶೇಖರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿಕೆಟ್‌ ಸಿಗದ ಬೆನ್ನಲ್ಲೇ ಬೆಂಗಳೂರಿಗೆ ತೆರಳಿರುವ ಗೂಳಿಹಟ್ಟಿ ಶೇಖರ್‌ ಜನಾರ್ದನ ರೆಡ್ಡಿ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಜನಾರ್ದನ ರೆಡ್ಡಿ ಅವರು ತಮ್ಮ ಪಕ್ಷದಿಂದಲೇ (ಕಲ್ಯಾಣ ರಾಜ್ಯ ಪ್ರಗತಿ ಪಕ್ಷ) ಕಣಕ್ಕಿಳಿಯುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿದ್ದರೂ ಕೂಡ ಪರಿಶಿಷ್ಟ ಜಾತಿಗೆ ಸೇರಿರುವ ಗೂಳಿಹಟ್ಟಿ ಶೇಖರ್‌ ಎರಡು ಬಾರಿ ಶಾಸಕರಾಗಿದ್ದರು. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಗೂಳಿಹಟ್ಟಿ ಶೇಖರ್‌ ಅವರು ಗೆಲುವು ಕಂಡಿದ್ದರು. ಈ ವೇಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಬೆಂಬಲವನ್ನು ಸೂಚಿಸುವ ಮೂಲಕ ದಕ್ಷಿಣ ಭಾರತದಲ್ಲಿಯೇ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದರು. ಆದರೆ ತದನಂತರದಲ್ಲಿ 2013 ರಲ್ಲಿ ನಡೆದ ಚುನಾವಣೆಯಲ್ಲಿ ಚೋಲು ಕಂಡಿದ್ದರು. 2018 ರಲ್ಲಿ ಬಿಜೆಪಿ ಸೇರಿದ್ದ ಗೂಳಿಹಟ್ಟಿ ಶಾಸಕರಾಗಿ ಆಯ್ಕೆಯಾಗಿದ್ದರು.

ಆದರೆ ಈ ಬಾರಿಯ ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್‌ ಯಾವ ಪಕ್ಷದಿಂದ ಕಣಕ್ಕೆ ಇಳಿಯಲಿದ್ದಾರೆ ಅನ್ನುವ ಕುರಿತು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಇಂದು ಅಥವಾ ನಾಳೆ ಗೂಳಿಹಟ್ಟಿ ಶೇಖರ್‌ ತಮ್ಮ ನಿರ್ಧಾರವನ್ನು ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ : Big Breaking : ಕರ್ನಾಟಕ ವಿಧಾನಸಭಾ ಚುನಾವಣೆ : ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಪ್ರಕಟ, ಯಾರಿಗೆಲ್ಲಾ ಟಿಕೆಟ್‌

ಇದನ್ನೂ ಓದಿ : Jagadish Shettar : ಚುನಾವಣಾ ಟಿಕೆಟ್‌ ಮಿಸ್‌, ಹೈಕಮಾಂಡ್‌ಗೆ ಸಡ್ಡು ಹೊಡೆದ ಜಗದೀಶ್‌ ಶೆಟ್ಟರ್‌

Gulihatti D Shekar Hosadurga MLA left BJP and contested from KRPP Party

Comments are closed.