ಮಂಗಳವಾರ, ಏಪ್ರಿಲ್ 29, 2025
HomekarnatakaBaburao Chinchansur : ಗುರುಮಿಟ್ಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ

Baburao Chinchansur : ಗುರುಮಿಟ್ಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ

- Advertisement -

ಗುರುಮಿಟ್ಕಲ್ : ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಅವರ ಕಾರು ಅಪಘಾತಕ್ಕೀಡಾಗಿದೆ. ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ. ಗುರುಮಿಟಕಲ್‌ (Gurumitkal) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಬಾಬುರಾವ್‌ ಚಿಂಚನಸೂರ್‌ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚುನಾವಣಾ ಪ್ರಚಾರ ಮುಗಿಸಿ ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರಿನಲ್ಲಿ ಇಬ್ಬರು ಚಾಲಕರು, ಗನ್‌ಮ್ಯಾನ್ ಸೇರಿದಂತೆ ನಾಲ್ವರು ಇದ್ದರು ಎಂದು ತಿಳಿದು ಬಂದಿದೆ.ಅಪಘಾತದಲ್ಲಿ ಚಿಂಚನಸೂರ್ (Baburao Chinchansur) ಅವರ ಕಾಲು ಮತ್ತು ಮುಖಕ್ಕೆ ಗಾಯಗಳಾಗಿವೆ. ಅವರನ್ನು ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಗನ್‌ಮ್ಯಾನ್‌ಗೆ ಯಾವುದೇ ಗಾಯಗಳಾಗಿಲ್ಲ, ಚಾಲಕ ನಿದ್ದೆ ಮಾಡಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಬುರಾವ್ ಚಿಂಚನಸೂರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ಮಾಹಿತಿ ಬಂದಿದೆ. ಇದನ್ನೂ ಓದಿ : ಹಾಲಾಡಿ ಶ್ರೀನಿವಾಸ್‌ ಶೆಟ್ಟಿ + ಕಿರಣ್‌ ಕೊಡ್ಗಿ : ಗೆಲುವು ಕಾಣುವರೇ ಮೊಳಹಳ್ಳಿ

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಬಾಬುರಾವ್‌ ಚಿಂಚನಸೂರ್‌ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ಚುನಾವಣೆ ಘೋಷಣೆಯಾಗುತ್ತಲೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಲ್ಲದೇ ಕಾಂಗ್ರೆಸ್‌ ಪಕ್ಷ ಅವರನ್ನು ಗುರುಮಿಟಕಲ್‌ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಬಾಬುರಾವ್‌ ಚಿಂಚನಸೂರ್‌ ಅವರು ಮೂರು ಬಾರಿ ಗುರುಮಿಟಕಲ್ (Gurumitkal) ಹಾಗೂ ಎರಡು ಬಾರಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಜವಳಿ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ : Mangaluru accident : ಮಂಗಳೂರು : ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಸಾರಿಗೆ ಸಂಸ್ಥೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಗ್ರಾಮವಾದ ಸಂಪಾಜೆಯಲ್ಲಿ ಶುಕ್ರವಾರ ಸಂಭವಿಸಿದೆ. ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಒಟ್ಟು 6 ಮಂದಿ ಮೃತರಾಗಿದ್ದಾರೆ. ದುರ್ಘಟನೆಯಲ್ಲಿ ಒಂದು ಮಗು ಸಹಿತ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಸುಳ್ಯದಿಂದ ವಿರಾಜಪೇಟೆ ಕಡೆಗೆ ಹೊರಟಿದ್ದ ಬಸ್ ಮತ್ತು ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ನಡುವೆ ಅಪಘಾತವಾಗಿದೆ. ಕಾರು ಸಂಪಾಜೆ ಪೆಟ್ರೋಲ್ ಪಂಪಿನಲ್ಲಿ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಾರಿನ ಬಾನೆಟಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆ ದಾರಿಯಲ್ಲಿ ಮಕ್ಕಳು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಕಾರಿನಲ್ಲಿದ್ದವರೆಲ್ಲ ಮಂಡ್ಯ ಮೂಲದ ಮಳವಳ್ಳಿಯವರು ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಾಗಿದೆ. ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರ ಹಾಗೂ ಗಾಯಾಳುಗಳ ವಿಳಾಸ ಇನ್ನಷ್ಟೇ ತಿಳಿದುಬರಬೇಕಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಉಪಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gurumitkal congress candidate Baburao Chinchansur car accident

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular