ಶಿವಮೊಗ್ಗ : ಇತ್ತೀಚಿಗೆ ಹತ್ಯೆಯಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ (Harsha Murder Case ) ನಿವಾಸಕ್ಕೆ ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಹರ್ಷ (Harsha) ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಪರ ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದ್ದಾರೆ.

ಹಿಂದೂಪರ ಕಾರ್ಯಕರ್ತ ಹರ್ಷನನ್ನು ಕಳೆದ ಕೆಲ ದಿನಗಳ ಹಿಂದೆ ಭಾರತಿನಗರದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಬಳಿಕ ಉದ್ವಿಗ್ನ ವಾಗಿದ್ದ ಶಿವಮೊಗ್ಗದಲ್ಲಿ ಕಲ್ಲು ತೂರಾಟ ನಡೆದಿದ್ದು ನಿಷೇಧಾಜ್ಞೆ ವಿಧಿಸಿ ಪರಿಸ್ಥಿತಿ ನಿಯಂತ್ರಿಸಲಾಗಿತ್ತು.ಈಗಾಗಲೇ ಹರ್ಷ ಕೊಲೆ ಪ್ರಕರಣಕ್ಕೆ (Harsha Murder Case ) ಸಂಬಂಧಿಸಿದಂತೆ 11 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿಚಾರಣೆ ನಡೆದಿದೆ. ಘಟನೆ ನಡೆದ ಹಲವು ದಿನಗಳ ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹರ್ಷ ನಿವಾಸಕ್ಕೆ ಭೇಟಿ ನೀಡಿದ್ದು ಸಾಂತ್ವನ ಹೇಳಿದ್ದಾರೆ. ಅಲ್ಲದೇ ಸರ್ಕಾರದ ಪರ 25 ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.

ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ 26 ವರ್ಷದ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ಕೊಡ್ತಾ ಇರಲಿಲ್ಲ.ಹಿಂದು ಯುವ ಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ. ಇದನ್ನೂ ಸಹಿಸಕ್ಕಾಗದೇ ಕೆಲವು ಕಿಡಿಗೇಡಿಗಳು ಕೊಲೆ (Harsha Murder Case ) ಮಾಡಿದ್ದಾರೆ. ಇದು ಅತ್ಯಂತ ಅಮಾನುಷ ಕೃತ್ಯ. ಹರ್ಷನ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ಅನ್ನು ಅವರಿಗೆ ಕೊಟ್ಟಿದ್ದೇನೆ. ಹಣ ಮುಖ್ಯ ಅಲ್ಲ. ಹರ್ಷನನ್ನು ಕುಟುಂಬದ ನೋವು ದೊಡ್ಡದು. ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂಬುವ ಪ್ರಾರ್ಥನೆ ಬಿಟ್ಟರೇ ನಮ್ಮ ಕೈಯಲ್ಲಿ ಏನು ಇಲ್ಲ ಎಂದ ಬಿಎಸ್ವೈ ಹೇಳಿದ್ದಾರೆ.
ಇತ್ತೀಚಿಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಭಾವಚಿತ್ರಕ್ಕೆ ಇಂದು ಪುಷ್ಪನಮನ ಸಲ್ಲಿಸಲಾಯಿತು. ನಂತರ ಅವರ ಮನೆಗೆ ಭೇಟಿ ನೀಡಿ, ಹರ್ಷ ಅವರ ತಂದೆ, ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಲಾಯಿತು. pic.twitter.com/VZ1BrQ99CI
— B.S. Yediyurappa (@BSYBJP) March 6, 2022
ಅಲ್ಲದೇ ನಮ್ಮ ಹಾಗೂ ಪ್ರಧಾನಿ ಮೋದಿಯವರ ಅಪೇಕ್ಷೆ ಎಲ್ಲರೂ ಒಟ್ಟಾಗಿ ಬಾಳಬೇಕು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳ್ಬೇಕು. ಸಣ್ಣಪುಟ್ಟ ಕಾರಣಕ್ಕೆ ಕೊಲೆ, ಗೊಂದಲ ಉಂಟು ಮಾಡಬಾರದು. ಅದರಿಂದ ಶಾಂತಿ – ಸುವ್ಯವಸ್ಥೆ ಭಂಗವಾಗುತ್ತೆ. ಅದಕ್ಕೆ ಯಾರು ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದಾರೆ. ಇತ್ತೀಚಿಗಷ್ಟೇ ಹರ್ಷ ಕುಟುಂಬಕ್ಕೆ ಸಚಿವ ಈಶ್ವರಪ್ಪ ಕುಟುಂಬ 11 ಲಕ್ಷ ರೂಪಾಗಿ ಸಹಾಯಧನ ನೀಡಿತ್ತು.
ಇದನ್ನೂ ಓದಿ : ಮಗನನ್ನು ಕಳೆದುಕೊಂಡ ನೋವಲ್ಲೂ ಗಾಯಾಳುಗಳಿಗೆ ಆರ್ಥಿಕ ನೆರವು ನೀಡಿದ ಹರ್ಷ ಕುಟುಂಬ
ಇದನ್ನೂ ಓದಿ : ಹಿಂದೂ ಹರ್ಷ ಹತ್ಯೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಮೇಲೆ ಮಾರಣಾಂತಿಕ ಹಲ್ಲೆ
Harsha Murder Case Ex CM B.S.Yediyurappa visit harsha house and donate 25 lakh