ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅನರ್ಹ : ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲವೇ ?

ಹೈಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಪ್ರಜಾಪ್ರತಿನಿಧಿ ಕಾಯ್ಡೆಯ ಅನ್ವಯ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುವಂತಿಲ್ಲ. ಆದರೆ ಸಂಸದ ಪ್ರಜ್ವಲ್‌ ರೇವಣ್ಣ ಅವರು ಹೈಕೋರ್ಟ್‌ (Karnataka High Court) ಆದೇಶದ ವಿರುದ್ದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶವಿದೆ.

ಬೆಂಗಳೂರು : ಲೋಕಸಭಾ ಚುನಾವಣೆಗೆ ಇನ್ನು ಕೇವಲ ಆರು ತಿಂಗಳು ಇರುವಾಗಲೇ ಹೈಕೋರ್ಟ್‌ ಜೆಡಿಎಸ್‌ಗೆ ಬಿಗ್‌ ಶಾಕ್‌ ಕೊಟ್ಟಿದೆ. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಅನುಮಾನ.

ರಾಜ್ಯದ ಏಕೈಕ ಜೆಡಿಎಸ್‌ ಸಂಸದ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಚುನಾವಣೆಯ ಹೊತ್ತಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹಾಲಿ ಜೆಡಿಎಸ್‌ ಶಾಸಕ ಎ.ಮಂಜು ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಕುರಿತು ವಾದ ವಿವಾದ ಆಲಿಸಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ. ನಟರಾಜನ್‌ ನೇತೃತ್ವದ ಪೀಠ ಇಂದು ಮಹತ್ವದ ಆದೇಶವನ್ನು ಹೊರಡಿಸಿದೆ.

Hassan JDS MP Prajwal Revanna is ineligible: Can't contest the election?
Image Credit‌ – MP Prajwal Revanna Facebook

ಹೈಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಪ್ರಜಾಪ್ರತಿನಿಧಿ ಕಾಯ್ಡೆಯ ಅನ್ವಯ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುವಂತಿಲ್ಲ. ಆದರೆ ಸಂಸದ ಪ್ರಜ್ವಲ್‌ ರೇವಣ್ಣ ಅವರು ಹೈಕೋರ್ಟ್‌ ಆದೇಶದ ವಿರುದ್ದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶವಿದೆ.

ಆದರೆ ಪ್ರಜ್ವಲ್‌ ರೇವಣ್ಣ ಅವರು ಮುಂದಿನ 30 ದಿನಗಳ ಒಳಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಅಲ್ಲದೇ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ ತೀರ್ಪಿನ ವಿರುದ್ದ ತಡೆ ತಂದರೆ ಮಾತ್ರವೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ದೊರೆಯಲಿದೆ. ಇದನ್ನೂ ಓದಿ : Congress Government : ಕೋವಿಡ್ ಅಕ್ರಮ ತನಿಖೆ : ಬಿಜೆಪಿ ಶಾಕ್ ಕೊಡಲು ಸಜ್ಜಾದ ಸಿಎಂ ಸಿದ್ದರಾಮಯ್ಯ

ಪ್ರಜ್ವಲ್‌ ಅನರ್ಹ ! ಅಷ್ಟಕ್ಕೂ ಏನಿದು ಪ್ರಕರಣ ?

ಕಳೆದ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ತೊರೆದು, ತುಮಕೂರಿನಿಂದ ಸ್ಪರ್ಧೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಹಿರಿಯ ಮುಖಂಡ ಎಚ್‌ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಅಲ್ಲದೇ ತಮ್ಮ ಎದುರಾಳಿ ಎ.ಮಂಜು ವಿರುದ್ದ ಭರ್ಜರಿ ಗೆಲುವು ದಾಖಲಿಸಿದ್ದರು.

Hassan JDS MP Prajwal Revanna is ineligible: Can't contest the election?
Image Credit Original Source

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದರು. ಒಂದೊಮ್ಮೆ ನ್ಯಾಯಾಲಯ ಪ್ರಜ್ವಲ್‌ ರೇವಣ್ಣ ಅವರನ್ನು ಅನರ್ಹಗೊಳಿಸಿದ್ರೆ ಎರಡನೇ ಅತೀ ಹೆಚ್ಚು ಮತಗಳನ್ನು ಗಳಿಸಿರುವ ತನ್ನನ್ನೇ ಸಂಸದ ಎಂದು ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇನ್ನೊಂದೆಡೆಯಲ್ಲಿ ನ್ಯಾಯವಾದಿ ಜಿ.ದೇವರಾಜೇಗೌಡ ಅವರು ಕೂಡ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಯ ವೇಳೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಇದೀಗ ಹಾಸನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿತ್ತು. ಇದೀಗ ನ್ಯಾಯಾಲಯದ ಆದೇಶ ಜೆಡಿಎಸ್‌ ಪಕ್ಷಕ್ಕೆ ಶಾಕ್‌ ಕೊಟ್ಟಿದೆ. ಇದನ್ನೂ ಓದಿ : ಸೋಲಿನಲ್ಲೇ ಕೊನೆಯಾಯ್ತಾ ನಿಖಿಲ್‌ ಕುಮಾರಸ್ವಾಮಿ ರಾಜಕೀಯ ಭವಿಷ್ಯ : ಅಂತಿಮ ನಿರ್ಧಾರ ಪ್ರಕಟಿಸಿದ ಎಚ್‌ಡಿಕೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

Hassan JDS MP Prajwal Revanna is ineligible: Can’t contest the election?

Comments are closed.