ಭಾನುವಾರ, ಏಪ್ರಿಲ್ 27, 2025
HomekarnatakaWife Murder : ಪತ್ನಿಯ ಕೊಲೆಗೈದು ಆತ್ಮಹತ್ಯೆಯ ನಾಟಕವಾಡಿ ಸಿಕ್ಕಿಬಿದ್ದ ಪತಿ

Wife Murder : ಪತ್ನಿಯ ಕೊಲೆಗೈದು ಆತ್ಮಹತ್ಯೆಯ ನಾಟಕವಾಡಿ ಸಿಕ್ಕಿಬಿದ್ದ ಪತಿ

- Advertisement -

ಹಾಸನ : Wife Murder: ಪತ್ನಿಯನ್ನು ಕೊಲೆಗೈದು ನಂತರ ಆಕೆಯನ್ನು ಮೃತದೇಹವನ್ನು ನೇತುಹಾಕಿ, ಆತ್ಮಹತ್ಯೆಯ ನಾಟಕವಾಡಿದ್ದ ಪತಿ ಮಹಾಶಯನೋರ್ವ ಪೊಲೀಸರ ಕೈಲಿ ಬಂಧಿಯಾಗಿರುವ ಘಟನೆ ಹಾಸನದ ಚೆನ್ನರಾಯಪಟ್ಟಣದಲ್ಲಿ ನಡೆದಿದೆ. ಹೇಮಾವತಿ (28 ವರ್ಷ) ಎಂಬಾಕೆಯೇ ಮೃತ ಮಹಿಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೌಸಿಂಗ್‌ ಬೋರ್ಡ್‌ ನಿವಾಸಿಯಾಗಿರುವ ಗುರುರಾಜ್‌ ಎಂಬಾತನೇ ಪತ್ನಿಯನ್ನು ಕೊಲೆಗೈದ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ಮೂಲದ ಹೇಮಾವತಿ ಎಂಬಾಯಕೆಯನ್ನು ಗುರುರಾಜ್‌ ಕಳೆದ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ಆರಂಭದಿಂದಲೂ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ನಿನ್ನೆ ತನ್ನ ಇಬ್ಬರು ಮಕ್ಕಳನ್ನು ತವರಿಗೆ ಕಳುಹಿಸಿದ್ದ ಪತಿ ಗುರುರಾಜ್‌ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ನಂತರ ಆಕೆಯ ಮೃತದೇಹವನ್ನು ನೇತುಹಾಕಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರಿಗೆ ಪತಿ ಗುರುರಾಜನ ಮೇಲೆ ಅನುಮಾನ ಮೂಡಿತ್ತು. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ.

ಇದೀಗ ಪತಿ ಗುರುರಾಜ್‌ನನ್ನು ಚನ್ನರಾಯಪಟ್ಟಣ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ವರದಕ್ಷಿಣೆಯ ಆಸೆಗೆ ಪತ್ನಿಯನ್ನು ಕೊಲೆಗೈದ ಪಾಪಿ ಪತಿ ಜೈಲು ಸೇರಿದ್ದಾನೆ. ಇತ್ತ ತಾಯಿಯನ್ನು ಕಳೆದುಕೊಂಡಿರುವ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

ಇದನ್ನೂ ಓದಿ : ಪ್ರಥಮ ರಾತ್ರಿ ಹೊಟ್ಟೆನೋವು, ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮಕೊಟ್ಟ ವಧು !

ಇದನ್ನೂ ಓದಿ : Noida Rape Case : ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ ಅತ್ಯಾಚಾರವೆಸಿಗಿದ ಯುವಕನ ಬಂಧನ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular