ಭಾನುವಾರ, ಏಪ್ರಿಲ್ 27, 2025
HomeCrimeHassan : ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಮಾರಾಮಾರಿ

Hassan : ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಮಾರಾಮಾರಿ

- Advertisement -

ಹಾಸನ (Hassan) : ಶಿಕ್ಷಕರಿಗೆ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಬ್ಬರು ಪರಸ್ಪರ ಬಡಿದಾಡಿಕೊಂಡಿರುವ (officials clashed) ಘಟನೆ ಹಾಸನ ಜಿಲ್ಲೆಯ ಅರಕಲಗೋಡು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಇಬ್ಬರಿಗೂ ಗಂಭೀರಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್‌ ಹಾಗೂ ಶಿಕ್ಷಕ ಸಂಯೋಜಕ ಗೀತಾನಂದ ಮುಂಬಳೆ ಎಂಬವರ ಮೈಕೈ ಮೀಲಾಯಿಸಿದ ಅಧಿಕಾರಿಗಳು. ಹಾಸ ಜಿಲ್ಲೆಯ ಅರಕಲಗೋಡು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಿನ್ನೆ ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಗಣಿತ ವಿಷಯದಲ್ಲಿ ಲೆಕ್ಕ ಬಿಡಿಸುವ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಇಬ್ಬರೂ ಕೂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕೊಠಡಿಗೆ ಬಂದಿದ್ದಾರೆ. ಈ ವೇಳೆಯಲ್ಲಿ ಶಿವಕುಮಾರ್‌ ಜೊತೆಗೆ ಮಾತನಾಡಬೇಕೆಂದು ಗಿರಿಜಾನಂದ ಮುಂಬಳೆ ಕರೆದಿದ್ದಾರೆ. ಇಬ್ಬರ ನಡುವಿನ ಮಾತುಕತೆಯ ವೇಳೆಯಲ್ಲಿ ಮಾತಿಗೆ ಮಾತು ಬೆಳೆದಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯೇ ಇಬ್ಬರೂ ಕೂಡ ಬಡಿದಾಡಿಕೊಂಡಿದ್ದಾರೆ. ಇಬ್ಬರ ತಲೆ, ಕೈ ಕಾಲುಗಳಿಗೆ ಗಾಯವಾಗಿದ್ದು, ಇಬ್ಬರನ್ನೂ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡುವಿನ ಮಾರಾಮಾರಿಯ ಕುರಿತು ಹಿರಿಯ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಮಕ್ಕಳಿಗೆ ಸುಸಂಸ್ಕೃತ ಶಿಕ್ಷಣವನ್ನು ಬೋಧಿಸಬೇಕಾಗಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಇದೀಗ ಬಡಿದಾಡಿಕೊಂಡಿರುವುದು ದುರಂತವೇ ಸರಿ.

ಮೈಸೂರಿನ ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಅವಧಿಯಲ್ಲಿ ಮಾರ್ಪಾಡು ಮಾಡಲಾಗಿದೆ. ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 9 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿ ಅಕ್ಟೋಬರ್‌ 3ರಿಂದ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು. ಆದ್ರೆ ಈ ಬಾರಿ ಸಪ್ಟೆಂಬರ್‌ 26 ರಿಂದ ನಾಡಹಬ್ಬ ದಸರಾ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯ ವೇಳೆಯಲ್ಲಿ ಮಕ್ಕಳಿಗೆ ರಜೆಯನ್ನು ನೀಡುವಂತೆ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲೀಗ ಮೈಸೂರು ಜಿಲ್ಲೆಯ ಶಾಲೆಗಳಿಗೆ ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 9ರ ವರೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದ್ರೆ ಗಾಂಧಿ ಜಯಂತಿ, ವಾಲ್ಮೀಕಿ ಜಯಂತಿಯ ಆಚರಣೆಯನ್ನು ಕಡ್ಡಾಯವಾಗಿ ಆಚರಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿಯೇ ಮಧ್ಯವಾರ್ಷಿಕ ರಜೆಯನ್ನು ಮಂಜೂರು ಮಾಡುವಂತೆ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ರಜೆಯ ಅವಧಿಯನ್ನು ಮಾರ್ಪಾಡು ಮಾಡಿ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲಿಯೂ ದಸರಾ ರಜೆಯನ್ನು ಮಾರ್ಪಾಡು ಮಾಡಲಾಗಿದೆ.

ಇದನ್ನೂ ಓದಿ : Teachers relief fund : ಮತ್ತೊಮ್ಮೆ ಶಿಕ್ಷಕರ ಆಕ್ರೋಶಕ್ಕೆ ಗುರಿಯಾದ ಸಚಿವರು: ಶಿಕ್ಷಕರ ಪರಿಹಾರ ನಿಧಿ ಹಣವೂ RTE ಶುಲ್ಕ ಪಾವತಿಗೆ ಬಳಕೆ

ಇದನ್ನೂ ಓದಿ : ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ : ಮಹತ್ವದ ಆದೇಶ

Hassan: The officials of the education department who clashed in the office

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular