ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಪ್ಯೂದಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ತಕ್ಷಣದಿಂದಲೇ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಬೇಕು. ನೈಟ್ ಕರ್ಪ್ಯೂ ಆರಂಭವಾಗಿ 10 ದಿನಗಳು ಕಳೆದಿದೆ. ಆದರೆ ನೈಟ್ ಕರ್ಪ್ಯೂದಿಂದ ಯಾವುದೇ ಪ್ರಯೋಜನವಿಲ್ಲ. ಜೀವನ ನೋಡಿಕೊಂಡ್ರೆ ಜೀವ ಉಳಿಸಲು ಕಷ್ಟವಾಗಲಿದೆ ಎಂದಿದ್ದಾರೆ.
ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಕುಳಿತುಕೊಂಡ್ರೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಬಡವರಿಗೆ ಆರ್ಥಿಕವಾಗಿ ಸಹಾಯ ಕೊಡಿ ಎಂದು ಸಲಹೆ ನೀಡಿದ್ದಾರೆ.