Rain Red Alert : ಮಹಾಮಳೆಗೆ ಉತ್ತರ ತತ್ತರ : 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಜುಲೈ 27ರ ವರೆಗೂ ಭಾರಿ ಮಳೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಈ ನಡುವಲ್ಲೇ ಜುಲೈ 27ರ ವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ ಜಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಇನ್ನೂ5 ದಿನಗಳ ಮುಂದುವರಿಯಲಿದೆ. ಕಳೆದೊಂದು ವಾರದಿಂದಲೂ ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಮಹಾರಾಷ್ಟ್ರ ದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇನ್ನೂ ಆರು ಜಿಲ್ಲೆಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆ ರಾಜ್ಯದಲ್ಲಿ ಮೂವರನ್ನು ಬಲಿ ಪಡೆದಿದೆ.

ರಾಜ್ಯದ ಹಲವು ಕಡೆಗಳಲ್ಲಿಯೂ ಭೂ ಕುಸಿತ ಉಂಟಾಗಿದ್ದು ಹಲವು ಮನೆಗಳು ಜಲಾವೃತವಾಗಿದೆ. ಅಲ್ಲದೇ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎನ್‌ಡಿಆರ್‌ಎಫ್‌ ತಂಡ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

Comments are closed.