ಇಂದಿನಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಅಲ್ಲದೇ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಾರ್ಚ್ 29ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

https://kannada.newsnext.live/no-exams-karnataka-minister-sureshkumar-clarification/

Comments are closed.