ಭಾನುವಾರ, ಏಪ್ರಿಲ್ 27, 2025
HomeCoastal Newsಕರಾವಳಿ, ಬೆಂಗಳೂರು ರಾಜ್ದ ಹಲವೆಡೆ 24 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ...

ಕರಾವಳಿ, ಬೆಂಗಳೂರು ರಾಜ್ದ ಹಲವೆಡೆ 24 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

- Advertisement -

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ರಾತ್ರಿ ಹಲವು ಕಡೆಯಲ್ಲಿ ಮಳೆ ಸುರಿದಿದ್ದು, ಕರಾವಳಿ ಕೆಲವು ಭಾಗಗಳಲ್ಲಿ ತುಂತುರು ಮಳೆಯಾದರೆ, ಇನ್ನುಳಿದ ಭಾಗಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಿದೆ. ಇನ್ನೂ ಈ ತಿಂಗಳ ಪ್ರಾರಂಭದಲ್ಲೇ ವರುಣನ ಆಗಮನದಿಂದ (Heavy rain fall in state) ಸ್ವಲ್ಪ ಭೂಮಿಗೆ ತಂಪೆರೆದಿದೆ. ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ (Mocha Cyclone Effect) ಅಲೆ ಎದ್ದಿದ್ದು, ಪರಿಣಾಮ ರಾಜ್ಯದ ಹಲವೆಡೆ ಸೈಕ್ಲೋನ್‌ ಭೀತಿ ಕೂಡ ಕಾಡುತ್ತಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ರಾಜ್ಯದ ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರಗಿ, ಬಿಳಗಿ, ಗೋಕಾಕ, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಹೊಸದುರ್ಗ : ಹಣ್ಣಿನ ಬುಟ್ಟಿಯ ಜೊತೆ ಜಯದ ವಿಶ್ವಾಸದಲ್ಲಿ ಗೂಳಿಹಟ್ಟಿ

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ರೈಲು ಸಮಯ ಬದಲಾವಣೆ

ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ಮೋಚಾದಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಕಲಬುರಗಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Heavy rain fall in state : Coastal, Bengaluru State heavy rain likely in 24 hours : Meteorological department forecast

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular