Heavy rain : ರಾಜ್ಯ ರಾಜಧಾನಿಯಲ್ಲಿ ನಾಳೆಯೂ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : Heavy rain : ಬೇಸಿಗೆ ಕಾಲವಾದರೂ ಸಹಿತ ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟ ಮಾತ್ರ ಮುಂದುವರಿದಿದೆ. ಈ ನಡುವೆ ಹವಾಮಾನ ಇಲಾಖೆಯು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಕೂಡ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಲೇ ಇದೆ. ಈಗಾಗಲೇ ತಗ್ಗು ಪ್ರದೇಶಗಳಲ್ಲಿ ವರುಣನ ಆರ್ಭಟದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ . ಭಾರೀ ಮಳೆಯದಾರೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗುತ್ತದೆ. ಹೀಗಾಗಿ ಬೆಂಗಳೂರಿಗರು ತಲೆ ಕೆಡಿಸಿಕೊಳ್ಳುವಂತಾಗಿದೆ.

ನಾಳೆ ಕೂಡ ಮಳೆ ಇರಲಿದೆ ಎಂಬ ವಿಚಾರವಾಗಿ ಮುನ್ಸೂಚನೆ ನೀಡುತ್ತಾ ಮಾತನಾಡಿದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಜಿ ನಿರ್ದೇಶಕ ಹಾಗೂ ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ, ಒಳನಾಡು ಪ್ರದೇಶದ ವಾಯುಭಾರ ಕುಸಿತವಾಗಿದೆ. ಇದರ ಪರಿಣಾಮವಾಗಿ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದೇ ಕಾರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆ ಸುರಿಯುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನು ಓದಿ : CBSE Class 10 12 : ಸಿಬಿಎಸ್​ಇ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇದನ್ನೂ ಓದಿ : Muzarayi Department Orders : ದೇವಾಲಯದ ಆವರಣದಲ್ಲಿ ಅನ್ಯಧರ್ಮಿಯ ವ್ಯಾಪಾರಕ್ಕೆ ಬ್ರೇಕ್‌ : ಮುಜರಾಯಿ ಇಲಾಖೆ ಖಡಕ್ ಆದೇಶ

Heavy rain in Bangalore tomorrow

Comments are closed.