ಕರಾವಳಿಯಲ್ಲಿ ಮುಂದಿನ 5 ದಿನ ಬಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಬೇಸಿಗೆಯ ಧಗೆಗೆ ಬಳಲಿದ್ದಾರೆ. ಇನ್ನೇನು ಮುಂಗಾರು ಮಳೆ (Heavy rain in coastal)‌ ಆಗುವ ಸಮಯ ಸಮೀಪ ಇರುವುದರಿಂದ ರೈತರು ವ್ಯವಸಾಯದ ಕಡೆಗೆ ಮುಖ ಮಾಡಿದ್ದಾರೆ. ಹಾಗೆಯೇ ಗೆದ್ದೆ ಕೆಲಸ ಆರಂಭವಾಗುದ್ದರಿಂದ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಷ್ಟೇ ಅಲ್ಲದೇ ಈ ಬಾರೀ ರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ ತುಸು ಜೋರಾಗಿಯೇ ಇದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ 5 ದಿನಗಳ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ನಾಳೆ ಮಳೇಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮುಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ. ಇದೇ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಯುವ ಮಾರುತಗಳು ಸಕ್ರಿಯವಾಗಲಿದೆ.

ಈ ಭಾರೀ ಜೂನ್‌ ಮೊದಲ ವಾರದಲ್ಲಿ ಮಾನ್ಸೂನ್‌ ಮಳೆ :
ವರ್ಷಂಪ್ರತಿ ಮುಂಗಾರು ಮಳೆ ಜೂನ್‌ 1 ರಂದು ಕೇರಳ ಪ್ರವೇಶಿಸುತ್ತದೆ. ಅಲ್ಲಿ ಮಳೆ ಸುರಿದ ಮೂರು ಅಥವಾ ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುತ್ತದೆ. ಈ ಸಲ ಮಳೆ ವಿಳಂಬದಿಂದ ರೈತರಿಗೆ ತೊಡಕಾಗಬಹುದು. ಇನ್ನೇನು ಮುಂದಿನ ವರ್ಷದ ಭತ್ತದ ಬೆಳೆಗೆ ಬಿತ್ತನೆ ಕೆಲಸ ಶುರು ಮಾಡಲಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ಇನ್ನುಳಿದಂತೆ ರೈತರು ಅದಕ್ಕಾಗಿಯೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ 8 ಸಚಿವರ ಪ್ರಮಾಣ ವಚನ

ಇದನ್ನೂ ಓದಿ : ಪ್ರದೀಪ್‌ ಈಶ್ವರ್‌ ಸಾಕು ತಾಯಿ ರತ್ನಮ್ಮ ವಿಧಿವಶ

ಮಾನ್ಸೂನ್‌ ಮಾರುತದ ವಿಳಂಬವಾಗುವ ನಿರೀಕ್ಷೆ ಇರುವುದರಿಂದ ಜೂನ್‌ 4ರಂದು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್‌ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆ ಕೂಡ ಇರುತ್ತದೆ. ಅದರಲ್ಲೂ ನಮ್ಮ ದೇಶ ಕೃಷಿ ಆಧರಿತವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟು ಮುಂಗಾರು ಮಳೆ ಒಳಗೊಂಡಿದೆ. ಹೀಗಾಗಿ ಈ ಮಳೆಯೇ ಸಕಾಲದಲ್ಲಿ ಬರದೇ ಇದ್ದಲ್ಲಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾದ್ಯತೆ ಇದೆ ಎಂದು ಮೂಲಗಳು ವರದಿ ಮಾಡಿದೆ.

Heavy rain in coastal: Chance of rain in the next 5 days

Comments are closed.