Heavy rain in Karnataka : ಕರ್ನಾಟಕದಲ್ಲಿ ಜೂನ್‌ 15 ವರೆಗೂ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : (Heavy rain in Karnataka) ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ. 13ರಿಂದ 15ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮೂರು ದಿನಗಳ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇನ್ನು ಭಾರೀ ಮಳೆಯಿಂದಾಗಿ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರದಲ್ಲಿ ಅಲೆಗಳು ಹೆಚ್ಚಾಗಬಹುದು. ‘ಬಹಳ ತೀವ್ರ’ ಚಂಡಮಾರುತ ಬಿಪರ್‌ಜೋಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಳ್ಳಲಿದೆ ಮತ್ತು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಈತನ್ಮಧ್ಯೆ ಕೇರಳ ಮತ್ತು ಕರ್ನಾಟಕ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : Launch of Shakti Yojana : ಶಕ್ತಿ ಯೋಜನೆಗೆ ನಾಳೆ ಚಾಲನೆ, ಸರಕಾರಿ ಬಸ್‌ ಓಡಿಸುವಂತೆ ಕರಾವಳಿಗರು ಪಟ್ಟು

ಮುಂದಿನ 24 ಗಂಟೆಗಳಲ್ಲಿ ಚಂಡ ಮಾರುತ ಮತ್ತಷ್ಟು ತೀವ್ರಗೊಳ್ಳುವ ಜೊತೆಗೆ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.. ಬೈಪಾರ್ಜೋಯ್ ಚಂಡಮಾರುತದ ನಿರೀಕ್ಷೆಯಲ್ಲಿ, ಅರಬ್ಬಿ ಸಮುದ್ರಲ್ಲಿ ಎತ್ತರದ ಎತ್ತರದ ಅಲೆಗಳು ಉಂಟಾಗಿದ್ದು, ಮುಂಜಾಗೃತಾ ಕ್ರಮವಾಗಿ ಬೀಚ್‌ ಗಳಲ್ಲಿ ಜೂನ್ 14 ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

Heavy rain in Karnataka : Chance of heavy rain till June 15 in Karnataka : Yellow alert announced

Comments are closed.