ಭಾನುವಾರ, ಏಪ್ರಿಲ್ 27, 2025
HomekarnatakaHeavy rain in Kukke Subramanya : ಕುಕ್ಕೆಯ ಆದಿ ಸುಬ್ರಹ್ಮಣ್ಯ ಜಲಾವೃತ : ನಾಗರ...

Heavy rain in Kukke Subramanya : ಕುಕ್ಕೆಯ ಆದಿ ಸುಬ್ರಹ್ಮಣ್ಯ ಜಲಾವೃತ : ನಾಗರ ಪಂಚಮಿಯಂದು ಭಕ್ತರಿಗಿಲ್ಲ ಕುಕ್ಕೆ ದರ್ಶನ

- Advertisement -

ಮಂಗಳೂರು : (Heavy rain in Kukke Subramanya)ಪಶ್ವಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕುಮಾರಾಧಾರ ನದಿ ಅಪಾಯಮಟ್ಟವನ್ನು ಮೀರಿ ಹರಿಯುತ್ತಿದೆ. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯದ (Kukke Subramanya ) ಆದಿ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದ್ದು, ಎರಡು ದಿನಗಳ ಕಾಲ ಭಕ್ತರಿಗೆ ಕುಕ್ಕೆ ದರ್ಶನಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧವನ್ನು ಹೇರಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕುಕ್ಕೆಯ ಆದಿ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣ ಜಲಾವೃತ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಕುಕ್ಕೆ ಸುಬ್ರಹ್ಮಣಯ್ದ ದರ್ಪಣ ತೀರ್ಥ ನದಿ ಉಕ್ಕಿ ಹರಿದ ಪರಿಣಾಮವಾಗಿ ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನದಿ ನೀರು ನುಗ್ಗಿದೆ. ಇದರಿಂದಾಗಿ ದೇವಸ್ಥಾನ ಜಲಾವೃತವಾಗಿದೆ. ಸಂಜೆ 5 ಗಂಟೆಯಿಂದಲೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಾರದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಎರಡು ದಿನಗಳ ಕಾಲ ಭಕ್ತರಿಗೆ ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ನಾಗರಪಂಚಮಿಯ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿತ್ತು. ಆದ್ರೆ ಭಾರೀ ಮಳೆಯಿಂದಾಗಿ ಭಕ್ತರಿಗೆ ನಿರಾಸೆ ಉಂಟಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಗುಡ್ಡ ಕುಸಿತ : ಇಬ್ಬರು ಮಕ್ಕಳ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅನಾಹುತವನ್ನೇ ಸೃಷ್ಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪರ್ವತ ಮುಖಿ ಪ್ರದೇಶದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಮನೆಯಲ್ಲಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿ, ಐವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

ನಿನ್ನೆ ರಾತ್ರಿಯ ವೇಳೆಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರಾದ ಶ್ರುತಿ ಮತ್ತು ಜ್ಞಾನಶ್ರೀ ಮಣ್ಣಿನಡಿಯಲ್ಲಿ ಸಿಲುಕಿ ಮೃತ ಪಟ್ಟಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳ ನೆರವಿನಿಂದ ರಕ್ಷಣಾ ಕಾರ್ಯಚರಣೆಯನ್ನು ನಡೆಸಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರ ತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : Reliance Jio 5G Network:ಭಾರತದಾದ್ಯಂತ ಅತ್ಯಾಧುನಿಕ 5ಜಿ ನೆಟ್‌ವರ್ಕ್ ಹೊರತರಲು ಸಿದ್ಧವಾದ ರಿಲಯನ್ಸ್ ಜಿಯೋ

ಇದನ್ನೂ ಓದಿ : Heavy rain hill collapse : ಭಾರೀ ಮಳೆ ಪರ್ವತಮುಖಿ ಬಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಸಾವು

heavy rain in Kukke Subramanya devotees not allowed two days parvathamuki hill collapse

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular