ಮುಂಗಾರು ಮಳೆ : ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ : ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಮುಂಗಾರು ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡದಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಎಲ್ಲೋ ಅಲರ್ಟ್ ಘೋಷಣೆಯನ್ನು ಮಾಡಿವೆ. ಜನರು ಎಚ್ಚರದಿಂದ ಇರುವಂತೆ ಸೂಚನೆಯನ್ನು ನೀಡಿದೆ. ಇನ್ನು ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದಲೇ ಮಳೆ ಸುರಿಯುತ್ತಿದ್ದು, ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

https://kannada.newsnext.live/good-news-bpl-apl-card-holder/

ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮನವಾಗುತ್ತಿದ್ದು, ಕರ್ನಾಟಕಕ್ಕೆ ಒಂದು ವಾರ ತಡವಾಗಿ ಮುಂಗಾರು ಪ್ರವೇಶಿಸಲಿದೆ. ಮಳೆಯ ಆಗಮನವಾಗುತ್ತಿದ್ದಂತೆಯೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ.

Comments are closed.