Heavy Rain Orange Alert : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಾದ್ಯಂತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಅದರಲ್ಲೂ ಈ 3 ಜಿಲ್ಲೆಗಳಲ್ಲಿ (Heavy Rain Orange Alert) ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ನ್ನು ಘೋಷಣೆ ಮಾಡಿದೆ. ಹೀಗಾಗಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಯ ಜನರು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ದಿನವಿಡೀ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಜೋರಾದ ಗಾಳಿ ಕಾಡ ಬೀಸುತ್ತಿದೆ. ಆದರೆ ಮೊನ್ನೆ ತಡರಾತ್ರಿ ಮಾತ್ರ ಸಾಧಾರಣ ಮಳೆ ಆಗಿರುತ್ತದೆ. ಇಂದು ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಎಲ್ಲಾ ಸಾಧ್ಯತೆ ಇದೆ.

ಇನ್ನು ರಾಜ್ಯದ ರಾಜಧಾನಿಯಲ್ಲಿ ಮಾತ್ರ ಬಿಟ್ಟು ಬೀಡದೇ ಮಳೆ ಸುರಿದಿರುವುದರಿಂದ ಜನರ ಜೀವನ ಅಸ್ಥವ್ಯಸ್ಥಗೊಂಡಿದೆ. ಇಂದು ಕೂಡ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣಕನ್ನಡ, ಉತ್ತರಕನ್ನಡ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : Nadoja Dr G Shankar : ವಿಧಾನ ಪರಿಷತ್‌ಗೆ ನಾಡೋಜಾ ಡಾ.ಜಿ.ಶಂಕರ್‌ ?

ಇದನ್ನೂ ಓದಿ : Congress five guarantee : ಮುಂದಿನ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

ಇನ್ನುಳಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರೀ ಗಾಳಿ ಬೀಸುತ್ತಿದೆ. ಮಳೆಯಾಗುವ ಸಂದರ್ಭದಲ್ಲಿ ಮತ್ತಷ್ಟು ಗಾಳಿ ವೇಗ ಹೆಚ್ಚಾಗಲಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Heavy Rain Orange Alert: Heavy rain, yellow alert announced in these districts of Karnataka

Comments are closed.