Heavy Rain Yellow Alert : ತಮಿಳುನಾಡಲ್ಲಿ ಮೇಲ್ಮೈ ಸುಳಿಗಾಳಿ ಕರ್ನಾಟಕದಲ್ಲಿ ಬಾರೀ ಮಳೆ : ಉಡುಪಿ, ದ.ಕ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌

ಉಡುಪಿ : ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕ ರಾಜ್ಯದಲ್ಲಿಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ (Heavy rain Yellow Alert ) ಮಾಡಲಾಗಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಲೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆಯನ್ನು ನೀಡಿದೆ. ಅದ್ರಲ್ಲೂ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆ ಸುರಿದಿತ್ತು. ಅಲ್ಲದೇ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ಇದೀಗ ಮತ್ತೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿಯಲ್ಲಿ ಹೆಚ್ಚಿದ ಬಿಸಿಲ ತಾಪ

ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಸುರಿದ ಮಳೆ ನಿನ್ನೆ ಕೊಂಚ ಬಿಡುವು ಪಡೆದಿತ್ತು. ಆದರೆ ಬಿಸಿಲ ಝಳ ಜನರನ್ನು ತತ್ತರಿಸುವಂತೆ ಮಾಡಿದೆ. ನಿನ್ನೆ ರಾತ್ರಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಸುರಿದಿದ್ದರೂ ಕೂಡ ಇಂದು ಮುಂಜಾನೆಯಿಂದಲೇ ಬಿಸಿಲ ಝಳ ಜನರಲ್ಲಿ ಭಯ ಹುಟ್ಟಿಸಿದೆ. ಕೇರಳಕ್ಕೆ ಮಾಸಾಂತ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕೇರಳದಲ್ಲಿ ಮಳೆಯಾಗುತ್ತಲೇ ರಾಜ್ಯಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : Bus Lorry Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಬಸ್‌ -ಲಾರಿ ಢಿಕ್ಕಿ, 9 ಸಾವು, 24 ಮಂದಿಗೆ ಗಾಯ

ಇದನ್ನೂ ಓದಿ : kn mohan kumar passes away : ಸ್ಯಾಂಡಲ್​ವುಡ್​ ನಿರ್ದೇಶಕ ಕೆ.ಎನ್​ ಮೋಹನ್​ಕುಮಾರ್​ ಇನ್ನಿಲ್ಲ

Heavy rain Yellow Alert Declare Karnataka

Comments are closed.