Heavy Rainfall alert : 4 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ: Yellow Alert ಘೋಷಣೆ

ಬೆಂಗಳೂರು : Heavy Rainfall Yellow Alert : ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಮುಂದಿನ 4 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನಿರಂತರ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 13ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಕರಾವಳಿ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯ ಎಚ್ಚರಿಕೆ ಮುಂದುವರಿಯಲಿದೆ. ಕರಾವಳಿ, ಗುಡ್ಡಗಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್ ಮತ್ತು ರಾಯಚೂರುಗಳಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ. ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಳೆದೊಂದು ವಾರದಿಂದಲೂ ಭಾರೀ ಮಳೆಯಿಂದಾಗಿ ತತ್ತರಿ ಹೋಗಿರುವ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಎರಡೂ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಜಾರ್ಖಂಡ್ ಮತ್ತು ಗುಜರಾತ್‌ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಬಿಹಾರ, ಮಧ್ಯಪ್ರದೇಶ, ತಮಿಳುನಾಡು, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : Mysore Dasara 2022: ಈ ಬಾರಿ ಅದ್ದೂರಿ ನಾಡಹಬ್ಬ, ದಸರಾ ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಇದನ್ನೂ ಓದಿ : ಗಣೇಶ ವಿಸರ್ಜನೆಯ ವೇಳೆ ವಿದ್ಯಾರ್ಥಿಯ ಬರ್ಬರ ಕೊಲೆ : 4 ವಿದ್ಯಾರ್ಥಿಗಳು ಅರೆಸ್ಟ್‌

Heavy Rainfall alert in Dakshina Kannada, Udupi, Uttara Kannada for 4 days Yellow Alert

Comments are closed.