ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಚಂಡಮಾರುತದ ಪರಿಣಾಮ ಸೆಪ್ಟೆಂಬರ್ 15ರ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದ ಒಳನಾಡಿನಲ್ಲೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿದಿದೆ. ಸೆಪ್ಟೆಂಬರ್ 15ರ ನಂತರ ಕರ್ನಾಟಕದಲ್ಲಿ ಭಾರೀ ಮಳೆಯ ( Heavy Rainfall Alert) ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD)ನೀಡಿದೆ.
ಇನ್ನೂ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮೇಲ್ಮೈ ಚಂಡಮಾರುತದ ರಚನೆಯಿಂದಾಗಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಮಳೆ ಯಾಗುತ್ತದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗಲಿದೆ. ಸೆಪ್ಟೆಂಬರ್ 15 ರ ನಂತರ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ : ಮ್ಯಾಟ್ರಿಮೋನಿ ಸೈಟ್‌ನಲ್ಲಿ ಯುವತಿಯ ಪರಿಚಯ : 1 ತಿಂಗಳಲ್ಲೇ ಸಾಫ್ಟ್‌ವೇರ್ ಇಂಜಿನಿಯರ್‌ಗೆ 1 ಕೋಟಿ ರೂಪಾಯಿ ವಂಚನೆ
ಆಗಸ್ಟ್‌ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಸೆಪ್ಟೆಂಬರ್‌ನಲ್ಲಿ ಚೇತರಿಸಿಕೊಂಡಿದೆ. ಇಲ್ಲಿಯವರೆಗೆ ಹೆಚ್ಚು ಕಡಿಮೆ ವಾಡಿಕೆ ಮಳೆಯಾಗಿದೆ. ರಾಜ್ಯದಲ್ಲಿ ಸೆ.1ರಿಂದ ನಿನ್ನೆಯವರೆಗೆ 58 ಮಿ.ಮೀ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಈ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 47 ಮಿ.ಮೀ. 58 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.24ರಷ್ಟು ಹೆಚ್ಚು ಮಳೆಯಾಗಿದೆ.
ಇದನ್ನೂ ಓದಿ : ಶಾಲೆಗಳಿಗೆ ದಸರಾ ರಜೆ ಕಡಿತ : ವಿಶೇಷ ಮಕ್ಕಳಿಗೆ ರಜೆಯೇ ರದ್ದು, ಬಾರೀ ಆಕ್ರೋಶ
ಕಳೆದ ಕೆಲವು ದಿನಗಳಿಂದ ಬಿಸಿ ವಾತಾವರಣ ಎದುರಿಸುತ್ತಿರುವ ಹಲವು ರಾಜ್ಯಗಳಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಾಯುವ್ಯ ಬಂಗಾಳ ಕೊಲ್ಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೊಸ ಚಂಡಮಾರುತ ರೂಪುಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ 2000 ರೂ. ಸಿಗದವರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಇದರಿಂದಾಗಿ ಸೆಪ್ಟೆಂಬರ್ 12 ರಿಂದ ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರ ದಲ್ಲಿ ಶನಿವಾರ ಮತ್ತು ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. IMD ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈಶಾನ್ಯ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ.
ಪೂರ್ವ ಭಾರತದಲ್ಲಿ ಗುಡುಗು ಸಹಿತ ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಮಾತ್ರವಲ್ಲದೇ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಸೆಪ್ಟೆಂಬರ್ 12 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹವಮಾನ ಉತ್ತಮವಾಗಿದೆ.
Heavy Rainfall Alert In Karnataka After September 15