Heavy Rainfall alert in Karnataka : ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ (Heavy Rainfall alert in Karnataka) ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿಯೂ ಮಳೆಯಾಗಲಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್‌ ಅಲರ್ಟ್‌ ಹಾಗೂ ಮುಂದಿನ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿ ಹೋಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಯನ್ನು ನಡೆಸುತ್ತಿವೆ. ಈಗಾಗಲೇ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಐಟಿ, ಬಿಟಿ ವಲಯದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದ್ದು, ಐಟಿ ಕಂಪೆನಿಗಳು ಬೇರೆಡೆಗೆ ಸ್ಥಳಾಂತರಗೊಳ್ಳುವ ಕುರಿತು ರಾಜ್ಯ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ. ಇದರ ಬೆನ್ನಲ್ಲೇ ಇದೀಗ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್‌ನಾರಾಯಣ ಅವರು ಅಧಿಕಾರಿಗಳು ಹಾಗೂ ಐಟಿ, ಬಿಟಿ ವಲಯದ ಪ್ರಮುಖರ ಸಭೆಯನ್ನು ಕರೆದಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಕಳೆದ ಎರಡು ದಿನಗಳ ಕಾಲ ನಿರಂತರವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಬುಧವಾರದಂದು ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕೆಲವೆಡೆಗಳಲ್ಲಿ ಸಹಜ ಸ್ಥಿತಿಗೆ ಮರುಳಿದ್ದರೂ ಕೂಡ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿರುವುದು ಬೆಂಗಳೂರು ನಿವಾಸಿಗಳನ್ನು ಆತಂಕಕ್ಕೆ ದೂಡಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಹಾಸನ, ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿಯೂ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ : 3 people died : ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ : ವಿದ್ಯುತ್​ ತಂತಿ ತಗುಲಿ ಮೂವರು ದುರ್ಮರಣ

ಇದನ್ನೂ ಓದಿ : Bengaluru flood : ಅನ್ನ ಕೊಟ್ಟ ಮಣ್ಣಿಗೆ ಅವಮಾನ ಮಾಡಬೇಡಿ: ಜನರಿಗೆ ಕವಿರಾಜ್ ಮನವಿ

Heavy Rainfall alert in Karnataka for next 3 days yellow Alert Declared

Comments are closed.