Heavy Rainfall Alert : ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Heavy Rainfall Alert) ನೀಡಿದೆ. ಮಧ್ಯಪ್ರದೇಶದಿಂದ ತಮಿಳುನಾಡಿನ ಕಡೆಗೆ ಗಾಳಿಯ ದಿಕ್ಕು ಬದಲಾವಣೆಯಾಗಿದ್ದು, ಇಂದಿನಿಂದ ಐದು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಭಾರೀ ಮಳೆ ಯಾಗಲಿದೆ. ಅದೇ ರೀತಿ ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ (Karnataka Heavy Rainfall Alert) ಇಂದು ಮೋಡ ಕವಿದ ವಾತಾವರಣವಿದ್ದು, ಗಾಳಿಯ ಪ್ರಮಾಣ ಹೆಚ್ಚಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.8 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕೊಡಗು, ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಒಳನಾಡಿನ ಹಲವೆಡೆ 2 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ 12.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಷ್ಟು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಗರಿಷ್ಟ ತಾಪಮಾನ ದಾಖಲಾಗಿದೆ. ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅಕಾಲಿಕ ಮಳೆಯಿಂದಾಗಿ ತಪಾಮಾನ ಇಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : IPL Injury : ಐಪಿಎಲ್ ಫ್ರಾಂಚೈಸಿಗಳಿಗೆ “ಇಂಜ್ಯುರಿ” ಶಾಕ್, ಯಾವೆಲ್ಲಾ ತಂಡಗಳಿಗೆ ತಟ್ಟಿದೆ ಗಾಯದ ಬಿಸಿ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದನ್ನೂ ಓದಿ : Virat Kohli : ರಾಯಲ್ ಚಾಲೆಂಜರ್ಸ್ ಸೈನ್ಯ ಸೇರಲು ಮುಂಬೈನಿಂದ ಹೊರಟ ರಣಬೇಟೆಗಾರ

Comments are closed.