Heavy Rainfall in Coastal : ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಹೆಚ್ಚಾಗಲಿದೆ ಮಳೆರಾಯನ ಆರ್ಭಟ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಗಾಳಿ ಸಮೇತ ವರುಣನ ಆರ್ಭಟ (Heavy Rainfall in Coastal) ಜೋರಾಗಿದೆ. ಹೀಗಾಗಿ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆರಾಯನ ಆರ್ಭಟ ಜೋರಾಗಲಿದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇಉನ್ನುಳಿದಂತೆ ತುಮಕೂರು, ವಿಜಯನಗರ, ಹಾಸನ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ. ಅದರಲ್ಲೂ ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ. ಆದ್ರಿಂದ ಮುಂದಿನ ಸೂಚನೆವರೆಗೂ ಸಮುದ್ರ ತೀರಕ್ಕೆ ಹೋಗುವ ಪ್ರವಾಸಿಗರು, ಮೀನುಗಾರರು ಸ್ಥಳೀಯ ವೀಕ್ಷಕರು ಸ್ವಲ್ಪ ಸಮಯ ದೂರವಿರುವುದು ಉತ್ತಮ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Karnataka Budget Session : ನಾಳೆಯಿಂದ ಕರ್ನಾಟಕ ಬಜೆಟ್ ಅಧಿವೇಶನ ಆರಂಭ : ನಿಷೇಧಾಜ್ಞೆ ಜಾರಿ

ಇದನ್ನೂ ಓದಿ : Heavy Rainfall in Karnataka : ರಾಜ್ಯದ ಈ 4 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ ವರದಿ

ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ತೀವ್ರತೆ ಹೆಚ್ಚಾಗಿದೆ. ಅರಬ್ಬೀ ಸಮುದ್ರದಲ್ಲಿನ ಹವಾಮಾನ ಬದಲಾವಣೆಗಳಿಂದಾಗಿ ಈ ಭಾಗದಲ್ಲಿ ಮುಂಗಾರು ಮಳೆ ಸುರಿಸುವ ಮೋಡಗಳ ಸಕ್ರಿಯಗೊಂಡಿದೆ. ಪ್ರತಿನಿತ್ಯ ಕರಾವಳಿ ಮೂರು ಜಿಲ್ಲೆಗಳಲ್ಲಿ ವಯಾಪಕ ಮಳೆ ದಾಖಲಾಗುತ್ತಿದೆ. ಈ ಮಳೆಯು ಈ ವಾರವಿಡೀ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rainfall in Coastal: Rainfall will increase in most parts of the coast in the next 24 hours

Comments are closed.