Red alert Karnataka : ಕರಾವಳಿ, ಮಲೆನಾಡಲ್ಲಿ 2 ದಿನ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ, ಮಲೆನಾಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ರೆಡ್ ಅಲರ್ಟ್ (Red alert Karnataka) ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆಗಸ್ಟ್ 5 ರವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 4 ರಂದು ಕೊಡಗಿಗೆ ಮತ್ತು ಆಗಸ್ಟ್ 5 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ವಾರ್ನಿಂಗ್ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಡಬ ತಾಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವಂತೆ ಕಡಬ ತಹಸೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ ನೀಡಿದ್ದಾರೆ. IMD ಮುಂದಿನ ಕೆಲವು ದಿನಗಳಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆ ನೀಡಿದೆ. IMD ಭಾರೀ ಮಳೆಯನ್ನು ಬಿಡುಗಡೆ ಮಾಡಿತು, ಇದು ಪ್ರತ್ಯೇಕವಾದ ಭಾರೀ ಫಾಲ್ಸ್ (64.5 mm-115.5 mm) ಜೊತೆಗೆ ವ್ಯಾಪಕವಾದ ಮಳೆಗೆ ತಕ್ಕಮಟ್ಟಿಗೆ ವ್ಯಾಪಕವಾಗಿದೆ.

ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಮತ್ತು ಶುಕ್ರವಾರ ಬೆಳಗಾವಿ, ಬಾಗಲಕೋಟೆ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬುಧವಾರದಿಂದ ಶನಿವಾರದವರೆಗೆ (ಆಗಸ್ಟ್ 3 – 6) ಕರ್ನಾಟಕದಾದ್ಯಂತ ಗುಡುಗು ಮತ್ತು ಮಿಂಚಿನ ಮಳೆ. ಬುಧವಾರದಿಂದ ಶುಕ್ರವಾರದವರೆಗೆ (ಆಗಸ್ಟ್ 3-5) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಮೇಲೆ ಅತಿ ಹೆಚ್ಚು ಮಳೆ (204 ಮಿಮೀ) ಶನಿವಾರ (ಆಗಸ್ಟ್ 6) ದಕ್ಷಿಣ ಒಳನಾಡು ಕರ್ನಾಟಕದ ಮೇಲೆ (115.5 ಮಿಮೀ-204 ಮಿಮೀ), ಗುರುವಾರ ಮತ್ತು ಶನಿವಾರದ ನಡುವೆ (ಆಗಸ್ಟ್ 4-6) ಉತ್ತರ ಒಳನಾಡಿನಲ್ಲಿ ಮತ್ತು ವಾರಾಂತ್ಯದಲ್ಲಿ (ಆಗಸ್ಟ್ 6 ಮತ್ತು 7) ಕರಾವಳಿ ಕರ್ನಾಟಕದಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಶಾಲೆಗಳ ಸುತ್ತಮುತ್ತ ಬಲೂನ್‌, ಐಸ್‌ ಕ್ರೀಂ, ಚಾಟ್ಸ್‌ ಮಾರಾಟ ನಿಷೇಧ : ಜಾರಿಯಾಯ್ತು ಹೊಸ ರೂಲ್ಸ್‌

ಇದನ್ನೂ ಓದಿ : Puneeth Rajkumar flowers Show : ಫಲಪುಷ್ಪ ಪ್ರದರ್ಶನದಲ್ಲಿ ನಮ್ಮ ಅಪ್ಪು : ಅಗಲಿದ ನಟ ಪುನೀತ್‌ ರಾಜ್‌ ಕುಮಾರ್‌ಗೆ ವಿಭಿನ್ನ ಗೌರವ

Heavy Rainfall in Karnataka next 2 days : Issued Red alert Karnataka, school holiday

Comments are closed.