ಕರ್ನಾಟಕದಲ್ಲಿ ಭಾರಿ ಮಳೆ : 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : Karnataka Weather Updates : ಕರ್ನಾಟಕದಲ್ಲಿ ಚಳಿಯ ಪ್ರಮಾಣ ಏರಿಕೆಯಾಗುತ್ತಿದ್ದರೂ ಕೂಡ ಮಳೆ ಮಾತ್ರ ಸದ್ಯಕ್ಕೆ ಬಿಡುವು ಪಡೆಯುವ ಕ್ಷಣಗಳು ಗೋಚರಿಸುತ್ತಿಲ್ಲ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ (Heavy rains Alert Karnataka) ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಡಿಸೆಂಬರ್ 6ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೇಲ್ಮೈ ಚಂಡಮಾರುತ ಉಂಟಾಗಿದೆ. ಅಲ್ಲದೇ ಸೋಮವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕರ್ನಾಟಕದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ.

ಡಿಸೆಂಬರ್ 7 ಮತ್ತು 8 ರಂದು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದ್ದು, ಡಿಸೆಂಬರ್ 8 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ರಾಮನಗರ, ತುಮಕೂರು. ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಡಿಸೆಂಬರ್ 10 ರಂದು ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೀದರ್ ನಲ್ಲಿ ಕನಿಷ್ಠ ತಾಪಮಾನ 14.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ : ATM New Rules : ಈ ಬ್ಯಾಂಕ್‌ ಗ್ರಾಹಕರು ಎಟಿಎಂ ಹಣ ಡ್ರಾ ಮಾಡುವ ಮೊದಲು ಈ ಹೊಸ ನಿಯಮ ತಪ್ಪದೇ ಓದಿ

ಇದನ್ನೂ ಓದಿ : Newborns death: ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡು 4 ನವಜಾತ ಶಿಶುಗಳ ಸಾವು: ತನಿಖೆಗೆ ಆದೇಶಿಸಿದ ಸರ್ಕಾರ

Heavy rains Alert Karnataka Weather Updates Yellow alert announced in 4 districts

Comments are closed.