‘ಹಿಂದಿ ಪರೀಕ್ಷೆಗೆ ಅಂಕವೇ ಪರಿಗಣಿಸಿ’ : ಹೈಕೋರ್ಟ್ ಖಡಕ್​ ಸೂಚನೆ

ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಾತುರಿಯ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡಿಂಗ್​ ಬದಲು ಅಂಕಗಳನ್ನೇ ನೀಡಬೇಕು ಎಂದು ಹೈಕೋರ್ಟ್ ನೀಡಿದ್ದ ಆದೇಶ ಮರುಪರಿಶೀಲನೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಎಸ್​ಎಸ್​ಎಲ್ಸಿ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.
ಶಿಕ್ಷಣ ಇಲಾಖೆಯು ಈ ಬಾರಿಯ ಎಸ್​ಎಸ್​ಎಲ್ಸಿ ಪರೀಕ್ಷೆಯಿಂದಲೇ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್​ ನೀಡಲು ನಿರ್ಧರಿಸಿತ್ತು. ಆದರೆ ಪರೀಕ್ಷಾ ಸಂದರ್ಭದಲ್ಲಿಯೇ ಈ ರೀತಿಯ ನಿಯಮ ದಿಢೀರ್​ ಜಾರಿಗೊಳಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಮೂವರು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್​ ಇಂದಿರೇಶ್​ ನೇತೃತ್ವದ ಪೀಠವು , ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಈ ರೀತಿಯಾಗಿ ಮೌಲ್ಯಮಾಪನ ಪದ್ಧತಿಯನ್ನು ಬದಲಾಯಿಸುವುದು ಕಾನೂನು ಬಾಹಿರ. ಯಾವುದೇ ನಿಯಮಾವಳಿಗಳನ್ನು ಜಾರಿಗೆ ತರುವಾಗಲೂ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಘೋಷಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಹಿಂದಿ ಪರೀಕ್ಷೆಗೆ ಗ್ರೇಡಿಂಗ್​ ಬದಲು ಈ ಮೊದಲಿನಂತೆಯೇ ಅಂಕಗಳನ್ನೇ ಪರಿಗಣಿಸುವಂತೆ ಸೂಚಿಸಿದೆ.

ಇದನ್ನೂ ಓದಿ: SSLC ಫಲಿತಾಂಶ 2026: ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ : ಹೈಕೋರ್ಟ್ ಮಹತ್ವದ ಆದೇಶ – ರಿಸಲ್ಟ್ ಯಾವಾಗ ಗೊತ್ತಾ ?

ಹೈಕೋರ್ಟ್​ ತನ್ನ ತೀರ್ಪು ಮರುಪರಿಶೀಲನೆಗೆ ನಿರಾಕರಿಸುತ್ತಿದ್ದಂತೆಯೇ, ಕೆಲ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ. ಗ್ರೇಡಿಂಗ್​ ಪದ್ಧತಿ ಜಾರಿಗೆ ಬಂದಿದೆ ಎಂದು ಅನೇಕರು ಹಿಂದಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸದೇ ಹೋಗಿದ್ದು, ಇದು ಒಟ್ಟಾರೆ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಸರ್ಕಾರದ ತರಾತುರಿಯ ನಿರ್ಧಾರದಿಂದಾಗಿ ವಿದ್ಯಾರ್ಥಿಗಳು ಬೆಲೆ ತೆರಬೇಕಾಗಿ ಬರಲಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories