ರಾಮನಗರದಲ್ಲಿ ಭಾರೀ ಮಳೆ : ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಜಲಾವೃತ

ರಾಮನಗರ : (Highway is completely flooded) ವಿಪಕ್ಷಗಳ ಅರೋಪದ ನಡುವೆ ಮೈಸೂರು- ಬೆಂಗಳೂರು ಹೆದ್ದಾರಿ ಲೋಕಾರ್ಪಣೆಗೊಂಡಿತ್ತು. ಲೋಕಾರ್ಪಣೆ ಗೊಂಡ ಆರೇ ದಿನಕ್ಕೆ ತಡರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ. ಹೆದ್ದಾರಿ ಸಂಪೂರ್ಣ ಜಲಾವೃತವಾದ ಕಾರಣ ಏಕಾಏಕಿ ವಾಹನಗಳ ಹೆದ್ದಾರಿಯಲ್ಲೇ ಕೆಟ್ಟು ನಿಂತಿದ್ದು, ಸರಣಿ ಅಪಘಾತಗಳು ಕೂಡ ಸಂಭವಿಸುತ್ತಿದೆ. ಇದರ ಜೊತೆಗೆ ಮಳೆಯ ಅವಾಂತರದಿಂದ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI), ಹೆದ್ದಾರಿಯಲ್ಲಿ ಮಳೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿತ್ತು. ಆದರೀಗ ಉದ್ಘಾಟನೆಯಾದ 6 ದಿನಕ್ಕೆ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಗೆ ನೂತನ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ ವೇನ ಸಂಗಬಸವನದೊಡ್ಡಿ ಮೇಲ್ಸೇತುವೆ ಹೆದ್ದಾರಿ ಬಳಿ ನೀರು ನಿಂತು ಸಂಪೂರ್ಣ ಜಲಾವೃತವಾಗಿದೆ. ಇದರಿಂದ ಹೆದ್ದಾರಿಯಲ್ಲಿಯೇ ಏಕಾಏಕಿ ವಾಹನಗಳು ಕೆಟ್ಟು ನಿಂತಿದ್ದು, ವಾಹನಗಳ ನಡುವೆ ಸರಣಿ ಅಪಘಾತವಾಗುತ್ತಿದೆ. ಜೊತೆಗೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ನೂತನ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಪದೇ ಪದೇ ಸಮಸ್ಯೆಗಳು ಎದುರಾಗುತ್ತಿದ್ದರೂ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸದಿರುವುರು ಜನರ ಆಕ್ರೋಶಕ್ಕೆ ಕಾಣವಾಗಿದೆ. ಈಗಾಗಲೇ ಮೈಸೂರು-ಬೆಂಗಳೂರು ಹೆದ್ದಾರಿ ಲೋಕಾರ್ಪಣೆಗೆ ವಿರೋಧಗಳು ವ್ಯಕ್ತವಾಗಿದ್ದವು. ಈ ನಡುವೆ ಇಂತಹದೊಂದು ಸಮಸ್ಯೆ ಜನರನ್ನು ಇನ್ನಷ್ಟು ಸಿಟ್ಟಿಗೇರಿಸಿದೆ.

ಇದನ್ನೂ ಓದಿ : Modi at Metro Show: ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ : ಮಾ. 25 ರಂದು ನಡೆಯಲಿದೆ ಮೆಟ್ರೊ ಶೋ

ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ, ಅಪಘಾತದಿಂದಾಗಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಹೆದ್ದಾರಿಯಲ್ಲಿನ ಅನಾಹುತಗಳ ಬಗ್ಗೆ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಅಸಮಾಧಾನ ಹೊರಹಾಕುತ್ತಿದ್ದು, ಅಪೂರ್ಣ ಕಾಮಗಾರಿಯೇ ಇವೆಲ್ಲದಕ್ಕೆ ಕಾರಣ ಎಂದು ಬಿಜೆಪಿ ನಾಯಕರು ಹಾಗೂ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆಯಾದಗಿನಿಂದ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಆತಂಕದ ಜೊತೆಗೆ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

Highway is completely flooded: Heavy rain in Ramanagara: Bangalore-Mysore highway is completely flooded

Comments are closed.