ಸೋಮವಾರ, ಏಪ್ರಿಲ್ 28, 2025
Homekarnatakaಹಿಜಾಬ್‌ ವಿವಾದ : ಕುಂದಾಪುರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ

ಹಿಜಾಬ್‌ ವಿವಾದ : ಕುಂದಾಪುರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ

- Advertisement -

ಕುಂದಾಪುರ : ಕರಾವಳಿ ಜಿಲ್ಲೆಯಲ್ಲಿ ಹಿಜಾಬ್‌ ವಿವಾದ ಭಾರೀ ಸದ್ದು ಮಾಡುತ್ತಿದೆ. ಅದ್ರಲ್ಲೂ ಹಿಜಾಬ್‌ ಧರಿಸುವುದಕ್ಕೆ ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಕುಂದಾಪುರದ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ (Hijab controversy saspects arrested) ಹುನ್ನಾರ ನಡೆಸಿ ಕುಂದಾಪುರದ ಜೂನಿಯರ್ ಕಾಲೇಜು ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ಕುಂದಾಪುರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಪರಾರಿಯಾಗಿರುವ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ನಿವಾಸಿಗಳಾದ ಹಾಜಿ ಅಬ್ದುಲ್ ಮಜೀದ್ (32 ವರ್ಷ ) ಹಾಗೂ ರಜಬ್ (41 ವರ್ಷ) ಬಂಧಿತ ಆರೋಪಿಗಳಾಗಿದ್ದಾರೆ. ಅಲ್ಲದೇ ಖಲೀಲ್‌, ರಿಜ್ವಾನ್ ಹಾಗೂ ಇಫೀಕರ್ ಎಂಬವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಕಿ ಬಂಧಿತ ಆರೋಪಿಯಾಗಿರುವ ಹಾಜಿ ಅಬ್ದುಲ್ ಮಜೀದ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 07 ಪ್ರಕರಣಗಳು ದಾಖಲಾಗಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುತ್ತಾನೆ. ಇನ್ನು ರಜಬ್‌ ವಿರುದ್ದ ಒಂದು ಪ್ರಕರಣ ದಾಖಲಾಗಿದೆ. ಆರೋಪಿಗಳು ಮತೀಯವಾಗಿ ಕೋಮು ಸಂಘರ್ಷವನ್ನು ಉಂಟು ಮಾಡುವ ಪ್ರವೃತ್ತಿಯವರಾಗಿದ್ದು, ಮಾರಕಾಸ್ತ್ರಗಳೊಂದಿಗೆ ಅಕ್ರಮ ಕೂಟ ಸೇರಿ ಪ್ರಚೋದನೆ ಯಿಂದ ಮಾರಕಾಸ್ತ್ರಗಳನ್ನು ಸಾರ್ವಜನಿಕವಾಗಿ ಬೀಸಿ ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನು ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಸದಾಶಿವ ಆರ್.‌ ಗವರೋಜಿ ಅವರು ಸಿಬ್ಬಂದಿಗಳೊಂದಿಗೆ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಭದ್ರತೆ ನೀಡುವ ಹಿನ್ನೆಲೆಯಲ್ಲಿ ಕಾಲೇಜಿನ ಬಳಿಯಲ್ಲಿ ಇದ್ದ ವೇಳೆಯಲ್ಲಿ ಆರೋಪಿಗಳು ಪೊಲೀಸರ ಕೈಯಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕುಂದಾಪುರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 14/2022 ಕಲಂ: ಕಲಂ 120(b), 143, 147, 148, 308 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕುಂದಾಪುರ ಕಾಲೇಜಲ್ಲಿ ಕೇಸರಿ ಶಾಲು, ಹಿಜಾಬ್‌ ವಿವಾದ : ವಿಫಲವಾಯ್ತು ಶಾಸಕ, ಪೋಷಕರ ಸಭೆ

ಇದನ್ನೂ ಓದಿ : ಬೈಂದೂರಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ 300 ವಿದ್ಯಾರ್ಥಿಗಳು : ಕರಾವಳಿಯಲ್ಲಿ ಮುಂದುವರಿದ ಹಿಜಬ್‌ – ಕೇಸರಿ ಶಾಲು ವಿವಾದ

(Hijab controversy Two saspects arrested, three escape near pre-college college in Kundapur)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular