Hijab Karnataka : ಹೈಕೋರ್ಟ್‌ ಐತಿಹಾಸಿಕ ತೀರ್ಪು, ಶಾಲೆಗಳಲ್ಲಿ ಹಿಜಾಬ್‌ ನಿಷೇಧ : ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ

ಬೆಂಗಳೂರು : ದೇಶದ ಗಮನ ಸೆಳೆದಿದ್ದ ಹಿಜಾಬ್‌ ವಿವಾದಕ್ಕೆ (Hijab Karnataka) ಸಂಬಂಧಿಸಿದಂತೆ ಇದೀಗ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಯಾವುದೇ ಕಾರಣಕ್ಕೂ ಹಿಜಾಬ್‌ ಧರಿಸುವಂತಿಲ್ಲ. ಸರಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನಿಸುವಂತಿಲ್ಲ. ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಈ ಮೂಲಕ ಸಮವಸ್ತ್ರ ವಿವಾದಕ್ಕೆ ಹೈಕೋರ್ಟ್‌ ತೆರೆ ಎಳೆದಿದೆ. ಶಾಲೆಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ಕೋರಿ ಉಡುಪಿ ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿ ಸದಸ್ಯ ಇಂದು ಮಹತ್ವದ ತೀರ್ಪನ್ನು ನೀಡಿದೆ. ಉಡುಪಿಯ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದ್ದ ಹಿಜಾಬ್‌ ವಿವಾದ ರಾಜ್ಯದಾದ್ಯಂತ ಕಿಡಿ ಹೊತ್ತಿಸಿತ್ತು. ಶಾಲೆ, ಕಾಲೇಜುಗಳು ವಿವಾದದ ಕೇಂದ್ರವಾಗಿ ಮಾರ್ಪಟ್ಟಿತ್ತು. ಈ ನಡುವಲ್ಲೇ ಕರ್ನಾಟಕ ಹೈಕೋರ್ಟ್‌ ಶಾಲೆಗಳಲ್ಲಿ ಹಿಜಾಬ್‌ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ, ಅಲ್ಲದೇ ಶಾಲೆ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಫೆಬ್ರವರಿ 11 ರಂದು ತೀರ್ಪು ನೀಡಿತ್ತು. ಸುದೀರ್ಘ ಅವಧಿಯ ವರೆಗೆ ವಾದ, ವಿವಾದವನ್ನು ಆಲಿಸಿದ್ದ ಹೈಕೋರ್ಟ್‌ ಇಂದು ಮಹತ್ವದ ಆದೇಶವನ್ನು ಹೊರಡಿಸಿದೆ.

ಇಂದು ಬೆಳಗ್ಗೆ 10.30 ಕ್ಕೆ ಹೈಕೋರ್ಟ್‌ಗೆ ಆಗಮಿಸಿದ್ದ ಮುಖ್ಯ ನ್ಯಾಯಮೂರ್ತಿ ಕಲಾಪ ಆರಂಭವಾಗುತ್ತಿದ್ದಂತೆಯೇ ಹಿಜಾಬ್‌ ತೀರ್ಪಿನ ಪ್ರತಿಗೆ ಸಹಿಯನ್ನು ಹಾಕಿದ್ದಾರೆ. ನಂತರದಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ ಅವರು ತ್ರಿ ಸದಸ್ಯ ಪೀಠದ ತೀರ್ಪನ್ನು ಪ್ರಕಟಿಸಿದ್ದಾರೆ. ಇನ್ಮುಂದೆ ರಾಜ್ಯ ಶಾಲೆ, ಕಾಲೇಜುಗಳಲ್ಲಿ ಸರಕಾರ ರೂಪಿಸಿರುವ ಸಮವಸ್ತ್ರ ಕಾನೂನನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಅಲ್ಲದೇ ಹಿಜಾಬ್‌, ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕತೆಯನ್ನು ಸಾರುವ ವಸ್ತ್ರಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ.

ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ಏನಾಗಿತ್ತು?

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ತ್ರಿ ಸದಸ್ಯ ಪೀಠ ವಿಚಾರಣೆಯನ್ನು(Hijab controversy hearing postponement) ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವಂತೆ ರಾಜ್ಯ ಸರಕಾರಕ್ಕೆ ನ್ಯಾಯಾಲಯ ಸೂಚನೆಯನ್ನು ನೀಡಿದೆ. ಆದರೆ ಅಂತಿಮ ಆದೇಶದವರೆಗೆ ಶಾಲೆ, ಕಾಲೇಜುಗಳಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಉಡುಗೆಗಳನ್ನು ತೊಡುವಂತಿಲ್ಲ ಎನ್ನುವ ಮೂಲಕ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಕೋರ್ಟ್ ಆದೇಶದಕ್ಕೆ ತಲೆಬಾಗಲೇ ಬೇಕು : ಗೃಹ ಸಚಿವ ಆರಗ ಜ್ಞಾನೇಂದ್ರ‌

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಇಂದು ಬಿಗಿ ಪೊಲೀಸ್‌ ಭದ್ರತೆಯನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಸಣ್ಣ ಪುಟ್ಟ ಗಲಾಟೆಯೂ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಈಗಾಗಲೇ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಇನ್ನು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಯಾವುದೇ ಕಾರಣಕ್ಕೂ ಅವಕಾಶವನ್ನೂ ನೀಡುವುದಿಲ್ಲ. ಸೂಕ್ಷ್ಮ ಪ್ರದೇಶಗಳಿಗೆ ವಿಶೇಷ ಭದ್ರತೆಯನ್ನು ಒದಗಿಸುವಂತೆ ಈಗಾಗಲೇ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇವೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಹೈಕೋರ್ಟ್‌ ಆದೇಶ ಪಾಲನೆ ಮಾಡ್ತೇವೆ ಶಾಸಕ ರಘುಪತಿ ಭಟ್‌

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ ತೀರ್ಪು ನೀಡಲಿದೆ. ತೀರ್ಪು ಯಾರ ಪರವಾಗಿ ಬಂದರೂ ಕೂಡ ಎಲ್ಲರೂ ನ್ಯಾಯಾಲಯದ ಆದೇಶಕ್ಕೆ ತಲೆಬಾಗ ಬೇಕು. ಹೈಕೋರ್ಟ್‌ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶವಿದೆ. ಹೀಗಾಗಿ ಯಾರೂ ಕೂಡ ಕಾನೂನನ್ನು ಮುರಿಯುವ ಕಾರ್ಯ ವನ್ನು ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಉಡುಪಿಯಲ್ಲಿ ಆರು ವಿದ್ಯಾರ್ಥಿನಿಯರು ಆರಂಭಿಸಿದ ಹಿಜಾಬ್ ವಿವಾದ ರಾಜ್ಯದಾದ್ಯಂತ ವಿಸ್ತರಿಸಿ ಶಾಲಾ ಕಾಲೇಜುಗಳಿಗೆ ಪೊಲೀಸರು, ರಾಜಕಾರಣಿಗಳು, ಕಾನೂನು ಎಂಟ್ರಿಯಾಗು ವಂತೆ ಮಾಡಿತು. ಮಾತ್ರವಲ್ಲ ಹಿಜಾಬ್ ಗೆ ಕೇಸರಿ ಶಾಲು ಉತ್ತರ ಎಂಬ ಅಲೆಯೊಂದು ಸೃಷ್ಟಿಯಾಗಿ ವಿವಾದ ಮತ್ತಷ್ಟು ಉಲ್ಬಣಿಸಿತು. ಕಾಲೇಜಿನಿಂದ ಹೈಕೋರ್ಟ್ ಅಂಗಳಕ್ಕೆ ತಲುಪಿದ ಹಿಜಾಬ್ ವಿವಾದ ನಿಧಾನಕ್ಕೆ ರಾಜಕೀಯ ಸ್ವರೂಪವನ್ನು ಪಡೆದು ಕೊಂಡು ಪಕ್ಷಗಳ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ (Hijab Controversy History) ಸದ್ಯ ಹೈಕೋರ್ಟ್ ತೀರ್ಪಿನೊಂದಿಗೆ ಕೊನೆಯಾಗುವ ಭರವಸೆ ಮೂಡಿದೆ. ಹಾಗಾದ್ರೇ ಇದುವರೆಗೂ ಹಿಜಾಬ್ ಪ್ರಕರಣದಲ್ಲಿ ಏನೆಲ್ಲ ಬೆಳವಣಿಗೆಗಳಾಯ್ತು ಎಂಬುದನ್ನು ಗಮನಿಸೋದಾದರೇ,

ಉಡುಪಿಯಿಂದ ಹೈಕೋರ್ಟ್‌ವರೆಗೆ ಹಿಜಾಬ್‌ ವಿವಾದ :

  • ಹಿಜಾಬ್ ಧರಿಸಲು ಅವಕಾಶ ಕೋರಿ ಜ.31ಕ್ಕೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಯ್ತು.
  • ಉಡುಪಿ ಮೂಲದ ವಿಧ್ಯಾರ್ಥಿನಿಯರಿಂದ ರಿಟ್ ಅರ್ಜಿ
  • ಫೆ.3 ರಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ
  • ಮೂರು ದಿನಗಳ ಕಾಲ ಏಕಸದಸ್ಯ ಪೀಠದಿಂದ ವಿಚಾರಣೆ
  • ಬಳಿಕೆ ಫೆ. 9ರಂದು ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ
  • ಫೆ,10 ರಂದು ವಿಸ್ತೃತ ಪೀಠದಿಂದ ಯಾವುದೇ ಧಾರ್ಮಿಕ ಗುರುತು ಧರಿಸಿ ಶಾಲೆ, ಕಾಲೇಜುಗಳಿಗೆ ತೆರಳದಂತೆ ಮೌಖಿಕ ಆದೇಶ
  • ಫೆ.11 ರಂದು ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ನಿಂದ ಮಧ್ಯಂತರ ಆದೇಶ
  • ನಂತರ 11 ದಿನಗಳ ಕಾಲ ಅರ್ಜಿದಾರರು, ಮಧ್ಯಂತರ ಅರ್ಜಿದಾರರ ವಾದ ಮಂಡನೆ
  • ಸರ್ಕಾರದ ಪರ ಅಡ್ವೊಕೇಟ್ ಜನರಲ್ ರಿಂದ ಸುಧೀರ್ಘ ವಾದ
  • ಅರ್ಜಿದಾರರ ಪರ ದೇವದತ್ ಕಾಮತ್, ರವಿವರ್ಮ ಕುಮಾರ್ ಸೇರಿ ಹಿರಿಯ ವಕೀಲರ ವಾದ
  • ಸರ್ಕಾರದ ಆದೇಶ, ಸಿಡಿಸಿ ನಿಯಮಾವಳಿಗಳ ಬಗ್ಗೆ ವಾದ ಮಂಡನೆ
  • ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿ ಆದೇಶ
  • ಫೆ.25 ರಂದು ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್
  • ಮಾರ್ಚ್ 15ಕ್ಕೆ ಹಿಜಬ್ ವಿವಾದದ ಅಂತಿಮ ಆದೇಶ ಬರೋದು ಬಹುತೇಕ ಖಚಿತವಾಗಿದ್ದು,
  • ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರನ್ನು ಒಳಗೊಂಡ ವಿಸ್ತ್ರತ ಪೀಠದಿಂದ ಅಂತಿಮ ಆದೇಶ ಹೊರಬೀಳಲಿದೆ. ವಿವಾದ (Hijab Controversy History) ಕರ್ನಾಟಕದಲ್ಲಿ ಆರಂಭ ಗೊಂಡಿದ್ದರೂ ದೇಶದ ಗಮನ ಸೆಳೆದಿದೆ. ಹೀಗಾಗಿ ನಾಳೆ ದೇಶದ ಚಿತ್ತ ಕರ್ನಾಟಕದ ಹೈಕೋರ್ಟ್ ನತ್ತ ನೆಟ್ಟಿದ್ದು, ಹೈಕೋರ್ಟ್ ತೀರ್ಪು ಮಹತ್ವದ ಮೈಲಿಗಲ್ಲಾಗಿದೆ

ಇದನ್ನೂಓದಿ : ಹಿಜಾಬ್ ಪ್ರಕರಣದಲ್ಲಿ ಅಚ್ಚರಿಯ ಬೆಳವಣಿಗೆ : ವಿಚಾರಣೆ ಮುಂದೂಡಲು ಹೈಕೋರ್ಟ್ ಗೆ ವಿದ್ಯಾರ್ಥಿನಿಯರ ಮನವಿ

ಇದನ್ನೂ ಓದಿ : ಹಿಜಾಬ್ ವಿದ್ಯಾರ್ಥಿನಿಯರ ಹೋರಾಟದ ಹಿಂದಿನ ಶಕ್ತಿ ಯಾರು ? ಬಿ.ಸಿ.ನಾಗೇಶ್ ಕೊಟ್ರು ಎಕ್ಸಕ್ಲೂಸಿವ್ ಡಿಟೇಲ್ಸ್

(Hijab Karnataka : Karnataka High Court give Hijab Controversy Judgement)

Comments are closed.