ಸಮವಸ್ತ್ರ ವಿವಾದ ಪ್ರಕರಣ ಏಕಸದಸ್ಯ ಪೀಠದಿಂದ ವಿಸ್ತ್ರತ ಪೀಠಕ್ಕೆ ವರ್ಗಾವಣೆ : ಸದ್ಯಕ್ಕೆ ಹಿಜಬ್​ ಬೇಡ ಎಂದ ಕೋರ್ಟ್​

ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಸಮವಸ್ತ್ರ ವಿವಾದ ಪ್ರಕರಣದ ತೀರ್ಪು ಇಂದೇ ಹೊರಬೀಳುತ್ತದೆ ಎಂದು ಬಹುತೇಕ ಎಲ್ಲರೂ ಭಾವಿಸಿದ್ದರು. ಆದರೆ ಇಂದು ವಿಚಾರಣೆಯನ್ನು ಪುನಾರಂಭಿಸಿದ ಹೈಕೋರ್ಟ್ (hijab row case) ಏಕಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠಕ್ಕೆ ವರ್ಗಾವಣೆ ಮಾಡಿದೆ.

ಸಮವಸ್ತ್ರ ವಿವಾದ ಪ್ರಕರಣದ ಸಂಬಂಧ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರು ಹಾಗೂ ಪೋಷಕರು ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆಯನ್ನು ಇಂದು ಮಧ್ಯಾಹ್ನ 2:30ಕ್ಕೆ ಮುಂದೂಡಿತ್ತು. ಅದರಂತೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ ಇದು ವಿಸ್ತ್ರತ ಪೀಠದಲ್ಲಿ ಚರ್ಚೆಯಾಗಬೇಕಾದ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ತುರ್ತಾಗಿ ಬಗೆಹರಿಸಬೇಕಾದ ಪ್ರಕರಣವಾಗಿದೆ. ಅಲ್ಲದೇ ಇದು ವಿಸ್ತ್ರದ ಪೀಠದಲ್ಲಿ ವಿಚಾರಣೆ ನಡೆಸಲು ಯೋಗ್ಯವಾದ ವಿಚಾರವಾಗಿದೆ, ಹೀಗಾಗಿ ಈ ಪ್ರಕರಣವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠಕ್ಕೆ ವರ್ಗಾವಣೆ ಮಾಡುತ್ತಿದ್ದೇನೆ. ಈ ವಿಭಾಗೀಯ ಪೀಠದಲ್ಲಿ ಯಾರು ಇರಬೇಕು ಹಾಗೂ ಎಷ್ಟು ಜನ ಇರಬೇಕು ಎಂಬುದನ್ನು ಮುಖ್ಯ ನ್ಯಾಯಮೂರ್ತಿಗಳೇ ನಿರ್ಧರಿಸುತ್ತಾರೆ. ವಿಸ್ತ್ರತ ಪೀಠವನ್ನು ಮುಖ್ಯ ನ್ಯಾಯಮೂರ್ತಿಗಳೇ ರಚನೆ ಮಾಡುತ್ತಾರೆ ಎಂದು ಹೇಳಿದರು.

ಮುಖ್ಯ ನ್ಯಾಯಮೂರ್ತಿಗಳಿಗೆ ಈ ಕೂಡಲೇ ಪ್ರಕರಣದ ಸಂಪೂರ್ಣ ಕಡತಗಳನ್ನು ವರ್ಗಾವಣೆ ಮಾಡುವಂತೆ ರಿಜಿಸ್ಟ್ರಾರ್​ಗೆ ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಆದೇಶ ನೀಡಿದರು. ಸದ್ಯಕ್ಕೆ ಈ ಪ್ರಕರಣದಲ್ಲಿ ಮಧ್ಯಂತರ ಆದೇಶವನ್ನು ನೀಡಲು ಸಾಧ್ಯವಿಲ್ಲ. ಮುಖ್ಯ ನ್ಯಾಯಮೂರ್ತಿಗಳು ವಿಸ್ತ್ರತ ಪೀಠವನ್ನು ರಚನೆ ಮಾಡಿದ ಬಳಿಕ ಅರ್ಜಿದಾರರು ಮಧ್ಯಂತರ ಆದೇಶಕ್ಕಾಗಿ ಮನವಿ ಮಾಡಬಹುದಾಗಿದೆ. ಈ ಪ್ರಕರಣದಲ್ಲಿ ಮಧ್ಯಂತರ ಆದೇಶವನ್ನೂ ಮುಖ್ಯ ನ್ಯಾಯಮೂರ್ತಿಗಳೇ ನೀಡುತ್ತಾರೆ. ಅಲ್ಲಿಯವರೆಗೂ ಹಿಜಾಬ್​ ಧರಿಸಿ ವಿದ್ಯಾರ್ಥಿನಿಯರು ಶಾಲಾ – ಕಾಲೇಜುಗಳಿಗೆ ಬರುವಂತಿಲ್ಲ ಎಂದು ಹೇಳಿದ ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದೆ.

ಇದನ್ನು ಓದಿ : ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ : Hijab Row Karnataka High Court: ಹಿಜಾಬ್-ಕೇಸರಿ ಶಾಲು: ಹೈಕೋರ್ಟ್‌ನಲ್ಲಿ ವಾದ ಪ್ರತಿವಾದ ಹೇಗಿತ್ತು? ಮಂಡನೆಯಾದ ಅಂಶಗಳೇನು?

hijab row case today updates

Comments are closed.