Hijab Verdict : ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ: ತಮಿಳುನಾಡಿದ ಜಮಾತ್ ನಿಂದ‌‌ಕೃತ್ಯ

ಬೆಂಗಳೂರು : ಹೈಕೋರ್ಟ್ ತೀರ್ಪಿನ ಬಳಿಕ ಕೊನೆಗೊಳ್ಳಲಿದೆ ಎಂದು ನೀರಿಕ್ಷಿಸಲಾಗಿದ್ದ ಹಿಜಾಬ್ ವಿವಾದ (Hijab Verdict)ಇನ್ನೂ ತಣ್ಣಗಾಗಿಲ್ಲ. ಬದಲಾಗಿ ಹಿಜಾಬ್ ವಿಚಾರದ ತುರ್ತು ವಿಚಾರಣೆಗೆ ಕೋರಿ ವಿದ್ಯಾರ್ಥಿನಿಯರ ಪರ ವಕೀಲರು ಸುಪ್ರೀಂ ಮೊರೆ ಹೋಗಿದ್ದಾರೆ. ಈ ಮಧ್ಯೆ ಹಿಜಾಬ್ ವಿಚಾರದಲ್ಲಿ ಇತ್ತೀಚೆಗೆ ಮಹತ್ವದ ತೀರ್ಪುನೀಡಿದ್ದ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಒಡ್ಡಲಾಗಿದ್ದು ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ತಮಿಳುನಾಡಿನ ತೌಹೀದ್ ಜಮಾತ್ ನಿಂದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಇದೀಗ ತೌಹೀದ್ ಜಮಾತ್ ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೋರಿ ಸಾರ್ವಜನಿಕರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಿದ್ದು ಈ ಆರೋಪಿತರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಿದ್ದಾರೆ‌

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ಹಿಜಾಬ್ ತೀರ್ಪು ನೀಡಿತ್ತು. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ಹಿಜಾಬ್​ ಧಾರಣೆ ಕಡ್ಡಾಯವಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತನ್ನತೀರ್ಪಿನಲ್ಲಿ ತಿಳಿಸಿತ್ತು. ಈ ತೀರ್ಪಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಒಡ್ಡಿದೆ ಎನ್ನಲಾಗಿದೆ.

ಈ‌ ಮಧ್ಯೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ. ಈ ತೀರ್ಪು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದ್ದು ಹೋಳಿ ರಜೆ ಬಳಿಕ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಈ ಅರ್ಜಿ ಸಲ್ಲಿಕೆ ಬೆನ್ನಲ್ಲೇ, ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಉಚ್ಚ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವ ಮೊದಲು ತನ್ನ ಮನವಿಯನ್ನು ಆಲಿಸಬೇಕು ಎಂದು ಮನವಿ ಮಾಡಿದ್ದಾರೆ. ಉಡುಪಿಯ . ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು. ನಾವು ತರಗತಿಯ ಒಳಗೂ ಹಿಜಾಬ್ ಧರಿಸಿಯೇ ಪಾಠ ಕೇಳುತ್ತೇವೆ ಎಂದಿದ್ದಜ ವಿವಾದ ಸೃಷ್ಟಿಸಿತ್ತು. ಉಡುಪಿಯಿಂದ ಆರಂಭವಾದ ಈ ವಿವಾದ ಬಳಿಕ ಹಿಜಾಬ್ ವರ್ಸಸ್ ಕೇಸರಿ ಶಾಲು ಸ್ವರೂಪ ಪಡೆದು ರಾಜ್ಯದಾದ್ಯಂತ ವ್ಯಾಪಿಸಿತ್ತು.

ಇದನ್ನೂ ಓದಿ : Hijab verdict : ಹಿಜಾಬ್ ತೀರ್ಪಿನಲ್ಲಿ ಹೈಕೋರ್ಟ್ ಪರಿಗಣಿಸಿದ ಅಂಶವೇನು ? ತೀರ್ಪಿನಲ್ಲೇನಿದೆ ? ಇಲ್ಲಿದೆ ವಿವರ

ಇದನ್ನೂ ಓದಿ : ಯಕ್ಷಗಾನಕ್ಕೂ ಕಾಲಿಟ್ಟ ಹಿಜಾಬ್‌ VS ಕೇಸರಿ ಶಾಲು ವಿವಾದ

(Hijab Verdict threat to the Karnataka high court justice)

Comments are closed.