ಭಾನುವಾರ, ಏಪ್ರಿಲ್ 27, 2025
HomekarnatakaHoliday announced Mangalore schools colleges : ಸಪ್ಟೆಂಬರ್‌ 2ರಂದು ಮಂಗಳೂರಿನ ಶಾಲೆ, ಕಾಲೇಜುಗಳಿಗೆ...

Holiday announced Mangalore schools colleges : ಸಪ್ಟೆಂಬರ್‌ 2ರಂದು ಮಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

- Advertisement -

ಮಂಗಳೂರು : (Holiday announced Mangalore schools colleges) ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯ ಸಪ್ಟೆಂಬರ್‌ 2 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆ ಹಾಗೂ ವಾಹನದಟ್ಟಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ಸಪ್ಟೆಂಬರ್‌ 2 ರಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಘೋಷಣೆ ಮಾಡಿದ್ದಾರೆ.

ಮಂಗಳೂರು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಐಟಿಐ ಸೇರಿದಂತೆ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಒಂದು ದಿನದ ರಜೆಯನ್ನು ನೀಡಲಾಗಿದೆ.

ಇನ್ನೊಂದೆಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೆ.2 ರಂದು ಮಂಗಳೂರಿಗೆ ಆಗಮಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ‌ ಅವರು ಮಧ್ಯಾಹ್ನ ಒಂದು ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಪ್ರಧಾನಿ ಬಳಿಕ ಹೆಲಿಕಾಪ್ಟರ್ ಮೂಲಕ ಎನ್ಎಂಪಿಟಿ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಕೆಲವು ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ‌ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯುವ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನಕ್ಕೆ ಆಗಮಿಸಲಿದ್ದಾರೆ. ಒಟ್ಟು ಮೂರು ಗಂಟೆಯ ತನಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

ಪ್ರಧಾನಿಯವರು ಭಾಗವಹಿಸುವ ಸರ್ಕಾರಿ ಕಾರ್ಯಕ್ರಮ ಇದಾಗಿದ್ದು ಈಗಾಗಲೇ 80% ಪೂರ್ವ ಸಿದ್ಧತೆಯಾಗಿದೆ. 70,000 ಮಂದಿ ಕೇಂದ್ರದ ಯೋಜನೆಯ ಫಲಾನುಭವಿಗಳನ್ನು ಸಹ ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಮಾಡಲಿದೆ.ಭದ್ರತೆಯ ದೃಷ್ಟಿಯಿಂದ ತಪಾಸಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ 11.30ರ ಒಳಗಡೆ ಸಮಾವೇಶ ನಡೆಯುವ ಸ್ಥಳಕ್ಕೆ ಬರಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ಎರಡು ಲಕ್ಷಕ್ಕೂ ಹೆಚ್ಚು ಜನ‌ ಸೇರುವ ನಿರೀಕ್ಷೆಯಿದೆ.

ಈಗಾಗಲೇ ಸಮಾವೇಶ ನಡೆಯುವ ಸ್ಥಳದಲ್ಲಿ ಅಂತಿಮ‌ ಹಂತದ ತಯಾರಿಗಳು ನಡೆಯುತ್ತಿದೆ. ಪ್ರಧಾನಿಯವರ ವಿಶೇಷ ಭದ್ರತಾ ಪಡೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.‌ ಎಲ್ಲಾ ತಯಾರಿ ಆದ ಬಳಿಕ ಪೂರ್ತಿ ಸ್ಥಳವನ್ನು ತಮ್ಮ ಕಂಟ್ರೋಲ್ ಗೆ ಎಸ್.ಪಿ.ಜಿ ಅಧಿಕಾರಿಗಳು ಪಡೆಯಲಿದ್ದಾರೆ. ಒಟ್ಟಿನಲ್ಲಿ ನಮೋ ಭಾಗವಹಿಸುವ ಈ ಸಮಾವೇಶ ಮುಂದಿನ ಚುನಾವಣೆ ದೃಷ್ಟಿಯಿಂದ ಬಿ.ಜೆ.ಪಿ ಬಹಳಷ್ಟು ಮಹತ್ವದಾಗಿದೆ.

ಇದನ್ನೂ ಓದಿ : teacher burns a boy’s genitals:ಚಡ್ಡಿಯಲ್ಲಿ ಮೂತ್ರ ಮಾಡಿದ್ದಕ್ಕೆ ಬಾಲಕನ ಗುಪ್ತಾಂಗವನ್ನೇ ಸುಟ್ಟ ಶಿಕ್ಷಕಿ

ಇದನ್ನೂ ಓದಿ : Agumbe Ghat : ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ : ಉಡುಪಿ ಡಿಸಿ ಕೂರ್ಮರಾವ್‌ ಆದೇಶ

Holiday announced for Mangalore schools and colleges on September 2

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular