cancellation of psi recruitment exam : ಪಿಎಸ್​ಐ ನೇಮಕಾತಿ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು :cancellation of psi recruitment exam : ರಾಜ್ಯದಲ್ಲಿ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಸಾಕಷ್ಟು ವ್ಯಕ್ತಿಗಳ ಬಂಧನವಾಗುತ್ತಿರುವ ನಡುವೆಯೇ ರಾಜ್ಯ ಸರ್ಕಾರವು 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಪಿಎಸ್​ಐ ನೇಮಕಾತಿ ರಾಜ್ಯದಲ್ಲಿ ರದ್ದಾಗಿದ್ದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.


ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ. ಬೆಂಗಳೂರು ಕೇಂದ್ರ, ಕಲಬುರಗಿಗಳಲ್ಲಿ ಪಿಎಸ್​ಐ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಲಾಗಿದೆ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ. ಸರ್ಕಾರವು ಈಗ ನಡೆದಿರುವ ಪಿಎಸ್​ಐ ಪರೀಕ್ಷೆಯ ಫಲಿತಾಂಶಗಳನ್ನು ರದ್ದಗೊಳಿಸಿ ಮರು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಎಂದು ಹೇಳಿದರು.


545 ಪಿಎಸ್​ಐ ಹುದ್ದೆಗಳಿಗೆ ಒಟ್ಟು 54289 ಮಂದಿ ಪರೀಕ್ಷೆಯನ್ನು ಬರೆದಿದ್ದರು. ಆದರೆ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಅಕ್ರಮದಲ್ಲಿ ಈಗಾಗಲೇ ಸಿಐಡಿ ಅಧಿಕಾರಿಗಳು ದಿವ್ಯಾ, ರುದ್ರೇಗೌಡ ಸೇರಿದಂತೆ ಹಲವು ಮಾಸ್ಟರ್ ಮೈಂಡ್​ಗಳನ್ನು ಬಂಧಿಸಿದೆ. ಹೀಗಾಗಿ ಇದೀಗ ರಾಜ್ಯ ಸರ್ಕಾರ ಪಿಎಸ್​ಐ ಪರೀಕ್ಷೆಗಳನ್ನೂ ರದ್ದುಗೊಳಿಸಿದ್ದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ. ಮರು ಪರೀಕ್ಷೆಗೆ ದಿನಾಂಕ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಚರ್ಚೆ ಇಲ್ಲ : ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದ ಬಳಿಕ ರಾಜ್ಯದಲ್ಲಿ ಮತ್ತೆ ಸಂಪುಟ ವಿಸ್ತರಣೆಯಾಗುತ್ತಾ ಅಥವಾ ಪುನರ್​ ರಚನೆಯಾಗುತ್ತಾ ಎಂಬ ಸುದ್ದಿಗಳು ರಾಜಕೀಯ ವಲಯಗಳಲ್ಲಿ ತೀವ್ರವಾಗಿ ಹರಿದಾಡುತ್ತಿವೆ. ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಸ್ಪಷ್ಟನೆಯನ್ನು ನೀಡಿದರು.


ಸಿಎಂ ಬಸವರಾಜ ಬೊಮ್ಮಾಯಿ ಯಶವಂತಪುರ ಬಳಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಪುಟ ವಿಸ್ತರಣೆಗಾಗಿ ನಾನು ದೆಹಲಿ ಪ್ರವಾಸ ಮಾಡುತ್ತಿಲ್ಲ. ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಅಧ್ಯಕ್ಷರು ಹಾಗೂ ಯಾವುದೇ ನಾಯಕರ ಜೊತೆಯಲ್ಲಿ ಚರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.


ಇಂದು ಸಂಜೆ ನಾನು ದೆಹಲಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದೇನೆ. ನಾಳೆ ಸುಪ್ರೀಂಕೋರ್ಟ್ನ ಕಾರ್ಯಕ್ರಮದಲ್ಲಿ ಭಾಗಿಯಾಗುವವನಿದ್ದೇನೆ. ದೆಹಲಿ ಭೇಟಿಗೂ ಸಂಪುಟ ವಿಸ್ತರಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅವಕಾಶ ನೀಡಿದರೆ ಈ ಬಗ್ಗೆ ಚರ್ಚೆ ಮಾಡುವೆ ಎಂದು ಹೇಳಿದರು.


ಸಂಪುಟ ವಿಸ್ತರಣೆಯ ಸಂಬಂಧ ದೆಹಲಿಯಲ್ಲಿ ಮಂತ್ರಿಗಳನ್ನು ಭೇಟಿ ಮಾಡುತ್ತಿಲ್ಲ. ಖಾಲಿ ಇರುವ ಸ್ಥಾನಗಳನ್ನು ತುಂಬಬೇಕು ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ವರಿಷ್ಠರ ಜೊತೆ ಚರ್ಚೆ ನಡೆಸಲು ಅವಕಾಶ ಸಿಕ್ಕರೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.

ಇದನ್ನು ಓದಿ : Aravind Kaushik Arrest : ಸ್ಯಾಂಡಲ್‌ವುಡ್ ನಿರ್ದೇಶಕ ಅರವಿಂದ ಕೌಶಿಕ್‌ ಅರೆಸ್ಟ್‌

ಇದನ್ನೂ ಓದಿ : kichcha sudeep vs ajay devgn : ಕಿಚ್ಚ ಸುದೀಪ- ಅಜಯ್​ ದೇವಗನ್​ ನಡುವೆ ಭಾಷಾ ವಾರ್​ ಶುರುವಾಗಿದ್ದು ಹೇಗೆ? ಇಲ್ಲಿದೆ ಕಂಪ್ಲೀಟ್​ ಡೀಟೆಲ್ಸ್​

home minister araga jnanendra announces cancellation of psi recruitment exam decision to re exam

Comments are closed.