ಬೆಂಗಳೂರು : Araga Jnanendra : ಪರಿಷತ್ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾದ ವಿಚಾರವಾಗಿ ಸಂತಸ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರದ ಮೂಲಕ ಹಿಂದೂ ಧರ್ಮದ ಬುಡ ಅಲ್ಲಾಡಿಸಲು ಯತ್ನಿಸಲಾಗುತ್ತಿತ್ತು. ಆದರೆ ಇದೀಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಮತಾಂತರಕ್ಕೆ ಸೇವೆಯ ಹೆಸರಿನಲ್ಲಿ ನಡೆಯುವ ಮತಾಂತರಗಳಿಗೆ ಕಡಿವಾಣ ಬೀಳಲಿದೆ ಎಂದು ಸಂತಸ ವ್ಯಕ್ತಪಡಿಸಿದರು .
ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಆರಗ ಜ್ಞಾನೇಂದ್ರ. ಗೋ ಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆಗಳು ಅಂಗೀಕಾರವಾಗಿದ್ದು ನನಗೆ ನಿಜಕ್ಕೂ ಸಂತಸ ತಂದಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಬಂದಿತ್ತು. ಇದೀಗ ಬಿಲ್ ಎರಡೂ ಸದನದಲ್ಲಿ ಅಂಗೀಕಾರಗೊಂಡಿದೆ. ಗೃಹ ಸಚಿವನಾಗಿ ನಾನೇ ಬಿಲ್ ಮಂಡಿಸಿದ್ದರಿಂದ ನನಗೆ ಈಗ ಹೆಮ್ಮೆ ಎನಿಸುತ್ತಿದೆ ಎಂದು ಹೇಳಿದ್ದಾರೆ.
ಮತಾಂತರದ ಹೆಸರಿನಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ಕೆಲ ಕುತಂತ್ರಿಗಳು ಮಾಡುತ್ತಿದ್ದರು. ಆದರೆ ಈಗ ಮತಾಂತರ ನಿಷೇಧ ಕಾಯ್ದೆ ಮೂಲಕ ಹಿಂದೂ ಧರ್ಮದ ರಕ್ಷಣೆಯಾಗಲಿದೆ. ಕಾಂಗ್ರೆಸ್ ಮೊದಲಿನಿಂದಲೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಲೇ ಬಂದಿತ್ತು. ಆದರೆ ಈಗ ದೇಶದ ಜನತೆಯೆದುರು ಕಾಂಗ್ರೆಸ್ನ ಮುಖವಾಡ ಕಳಚಿಬಿದ್ದಿದೆ ಎಂದು ಹೇಳಿದರು.
ವಿಧಾನಪರಿಷತ್ನಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದರು. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆಯನ್ನು ವಿಧಾನಪರಿಷತ್ನಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಈ ವಿಧೇಯಕ ಮಂಡನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರು ಈ ಮಸೂದೆ ಸಂವಿಧಾನಕ್ಕೆ ವಿರೋಧವಾಗಿದೆ ಎಂದು ವಾದಿಸಿದ್ದರು. ಹಂಗಾಮಿ ಸಭಾಪತಿ ರಘುನಾಥ ರಾವ್ ಮುಲ್ಕಾಪುರೆ ವಿಧೇಯಕಕ್ಕೆ ಮತ ಹಾಕುತ್ತಿದ್ದಂತೆಯೇ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ಹೊರ ಹಾಕಿದ್ದರು.
ಇದನ್ನೂ ಓದಿ : Ravindra Jadeja: 10 ದಿನಗಳ ನಂತರ ಬೆಡ್‌ನಿಂದ ಮೇಲೆದ್ದು ನಿಂತ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ
Home Minister Araga Jnanendra expressed happiness over the passing of the Prohibition of Conversion Bill