IMA CASE ACB Raid : ಶಾಸಕ ಜಮೀರ್‌ ಅಹಮದ್‌ ಖಾನ್‌ ಗೆ ಎಸಿಬಿ ಶಾಕ್‌ : ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಗೆ (IMA CASE ACB Raid) ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರು ನಗರದ ಪ್ರೇಜರ್‌ ಟೌನ್‌ನಲ್ಲಿರುವ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ಪ್ರೇಜರ್‌ ಟೌಟ್‌ನಲ್ಲಿರುವ ಮನೆಯ ಮೇಲೆ ಸುಮಾರು 40 ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿಯನ್ನು ನಡೆಸಿದ್ದಾರೆ. ಜಮೀರ್‌ ಅವರಿಗೆ ಸೇರಿದ ನಿವಾಸ, ಸಿಲ್ವರ್‌ ಓಕ್‌ ಅಪಾರ್ಟ್‌ಮೆಂಟ್‌, ಸದಾಶಿವನಗರದಲ್ಲಿರುವ ಗೆಸ್ಟ್‌ ಹೌಸ್‌, ಬನಶಂಕರಿಯಲ್ಲಿರುವ ಜಿ.ಕೆ.ಅಸೋಸಿಯೇಟ್ಸ್‌, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಳೆದ ವರ್ಷ ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಜಮೀರ್‌ ಅಹಮದ್‌ ಖಾನ್‌ ಅವರ ವಿರುದ್ದ ಜಾರಿ ನಿರ್ದೇಶನಾಲಯದ ನಿರ್ದೇಶನದಂತೆ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದ್ದಾರೆ. ಬೆಂಗಳೂರು ನಗರದ ಐದು ಕಡೆಗಳಲ್ಲಿ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆಯ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಎಸಿಬಿ ದಾಳಿಯ ಬೆನ್ನಲ್ಲೇ ಸ್ಥಳದಲ್ಲಿ ಭದ್ರತೆಯನ್ನು ಒದಗಿಸಲಾಗಿದೆ.

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಒಡೆತನದ ನ್ಯಾಷನಲ್‌ ಟ್ರಾವೆಲ್ಸ್‌ನಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದ್ದು, ಸಿಸಿ ಸಿಟಿ ಕನೆಕ್ಷನ್‌ ಕಟ್‌ ಮಾಡಿ ಎಬಿಸಿ ಅಧಿಕಾರಿಗಳು ಕಚೇರಿಯ ಸೀಲಿಂಗ್‌ ಪಿಓಪಿಯನ್ನು ಕಿತ್ತು ಪರಿಶೀಲನೆ ನಡೆಸಿದ್ದಾರೆ. ಕಳೆದ ೩೦ ನಿಮಿಷಗಳಿಂದಲೂ ಕಡತ ಪರಿಶೀಲನೆಯ ಕಾರ್ಯವನ್ನು ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕೆಜಿಎಫ್‌ ಬಾಬು ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ಈ ದಾಳಿಯ ಮುಂದುವರಿದ ಭಾಗವೇ ಇದೀಗ ಜಮೀರ್‌ ಮನೆಯ ಮೇಲೆ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : Udupi School College Holiday : ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಇದನ್ನೂ ಓದಿ : Roshan’s dead body found : ಮರವಂತೆ ಬೀಚ್​ಗೆ ಕಾರು ಬಿದ್ದ ಪ್ರಕರಣ : ನಾಪತ್ತೆಯಾಗಿದ್ದ ರೋಷನ್​ ಮೃತದೇಹ ಪತ್ತೆ

IMA CASE ACB Raid Mla Jameer Ahamed Khan House

Comments are closed.