IMD Alert : ಕರ್ನಾಟಕದಲ್ಲಿ ನಾಳೆಯಿಂದ (ಜುಲೈ 3) ರಣಮಳೆ

IMD Alert : ಬೆಂಗಳೂರು : ಕರ್ನಾಟಕದಲ್ಲಿ ಜುಲೈ 3 ರಿಂದ ಬಾರೀ ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಮತ್ತು ಭಾರತೀಯ ಹವಾಮಾನ ಇಲಾಖೆ (IMD) ಈ ಬಗ್ಗೆ ಮುನ್ಸೂಚನೆ ನೀಡಿವೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಇಂದು (ಜುಲೈ 2) ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಕರ್ನಾಟಕದ ಹಲವು ಪ್ರದೇಶಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.

IMD Alert : ಜುಲೈನಲ್ಲಿ ಅತ್ಯಧಿಕ ಮಳೆ

ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯನ್ನು ನೀಡಿದೆ. ಐಎಂಡಿ ನೀಡಿರುವ ಮಾಹಿತಿಯ ಪ್ರಕಾರ ಜುಲೈ ತಿಂಗಳಿನಲ್ಲಿ 106% ರಷ್ಟು ಮಳೆ ಹೆಚ್ಚಳವಾಗಲಿದೆ.

Also Read : ಹೃದಯಾಘಾತಕ್ಕೂ ಮೊದಲೇ ಸಿಗುತ್ತೆ ಮುನ್ಸೂಚನೆ : ಈ ತಪ್ಪು ನೀವೂ ಮಾಡ್ಬೇಡಿ

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈನಲ್ಲಿ ಭಾರೀ ಮಳೆಯಾಗಲಿದೆಯಂತೆ.

ಬೆಂಗಳೂರಿನಲ್ಲಿ ಜುಲೈನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ತಿಂಗಳಲ್ಲಿ ತಾಪಮಾನವು 19.8°C ನಿಂದ 26.4°C ವರೆಗೆ ಇರುತ್ತದೆ.

ಕರ್ನಾಟಕದ ಒಳನಾಡು ಜಿಲ್ಲೆಗಳಾದ ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಜುಲೈನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Also Read : ಬೆಂಗಳೂರು – ಮಂಗಳೂರು ನಡುವೆ 6 ಗಂಟೆ ಪ್ರಯಾಣ..! ವಂದೇ ಭಾರತ್‌ ರೈಲು ಸಂಚಾರ

IMD Alert Heavy Rainfall in Karnataka till after July 3rd Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories