ಡಿ.22ರವರೆಗೂ ರಾಜ್ಯದಲ್ಲಿ ಮುಂದುವರಿಯಲಿದೆ ಚಳಿ : ಹೇಗಿರಲಿದೆ ಕರಾವಳಿ ಜಿಲ್ಲೆಗಳ ವಾತಾವರಣ ?
Karnataka Weather: ರಾಜ್ಯದ ಜನತೆ ಈಗಾಗಲೇ ತೀವ್ರ ಚಳಿಗೆ ಕಂಗಾಲಾಗಿದ್ದಾರೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಚಳಿಯ ವಾತಾವರಣ ಇದೇ ರೀತಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ತಾಪಮಾನ ಇನ್ನೂ 3 ಡಿಗ್ರಿ ಕುಸಿತ ಕಾಣಲಿದೆ ಎಂದು ಐಎಂಡಿ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟ ಮೋಡ ಕವಿದ ವಾತಾವರಣ ಇರಲಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇದ್ದರೆ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಧಾರವಾಡದಂತಹ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಚಾಲಕರಿಗೆ ಗುಡ್ ನ್ಯೂಸ್: ದುಪ್ಪಟ್ಟಾಯ್ತು ಮಾಸಿಕ ಭತ್ಯೆ ಹಾಗೂ ಪುರಸ್ಕಾರ ದರ
ಕರಾವಳಿ ಕರ್ನಾಟಕ ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ದಕ್ಷಿಣ ತಮಿಳುನಾಡು ಹಾಗೂ ಸಮೀಪದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪ್ರಸರಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



