state guidelines : ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಕೋವಿಡ್​ ಗೈಡ್​ಲೈನ್ಸ್​

ಬೆಂಗಳೂರು : state guidelines : ರಾಜ್ಯದಲ್ಲಿ ಕೋವಿಡ್​ ಸೋಂಕಿನ ಪ್ರಕರಣಗಳು ಏರಿಕೆ ಆಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್​, ಆಸ್ಟ್ರೇಲಿಯಾ, ಜಪಾನ್​, ದಕ್ಷಿಣ ಕೊರಿಯಾ, ವಿಯೆಟ್ನಾಂ ಹಾಗೂ ನ್ಯೂಜಿಲೆಂಡ್​ಗಳಲ್ಲಿ ಕೊರೊನಾ ಪಾಸಿಟಿವ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮ ಕೈಗೊಂಡಿದೆ . ಮಂಗಳೂರು ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ರ್ಯಾಪಿಡ್​ ಟೆಸ್ಟಿಂಗ್​, ಥರ್ಮಲ್​ ಸ್ಕ್ರೀನಿಂಗ್​ಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರವು ಸೂಚನೆ ನೀಡಿದೆ.


ಜಪಾನ್​ ಹಾಗೂ ಥೈಲ್ಯಾಂಡ್​ನಿಂದ ಬೆಂಗಳೂರಿಗೆ ನೇರ ವಿಮಾನ ಸಂಪರ್ಕವಿದೆ , ಹೀಗಾಗಿ ಮುಖ್ಯವಾಗಿ ಜಪಾನ್ ಹಾಗೂ ಥೈಲ್ಯಾಂಡ್​ನಿಂದ ಬರುವ ಪ್ರಯಾಣಿಕರನ್ನೇ ಗುರಿಯಾಗಿಟ್ಟುಕ್ಕೊಂಡು ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆಯು ಬಿಡುಗಡೆ ಮಾಡಿದೆ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಈ ಮಾರ್ಗಸೂಚಿಗಳ ಕಡ್ಡಾಯ ಪಾಲನೆಗೆ ಆದೇಶಿಸಲಾಗಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಿಂದ ಸೋಂಕು ಹರಡುವ ಅಪಾಯ ಹೆಚ್ಚಿರುವುದರಿಂದ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸೋಂಕನ್ನು ತಡೆಯಲು ಸರ್ಕಾರ ಪ್ಲಾನ್​ ಮಾಡಿದೆ.


ಜಪಾನ್​ ಹಾಗೂ ಥೈಲ್ಯಾಂಡ್​ನಿಂದ ರಾಜ್ಯದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ಪ್ರಯಾಣಿಕರಿಗೆ ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯವಾಗಿರಲಿದೆ.ಇದರ ಜೊತೆಯಲ್ಲಿ ಈ ಎರಡು ದೇಶಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಕಾಲ ಟೆಲಿ ಮಾನಿಟರಿಂಗ್​ಗೆ ಹಾಜರಾಗಬೇಕು ಕೊರೊನಾ ಲಕ್ಷಣ ಹೊಂದಿರುವ ಪ್ರಯಾಣಿಕರ ಸ್ವಾಬ್​ಗಳನ್ನು ವಿಮಾನ ನಿಲ್ದಾಣದಲ್ಲಿರುವ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಪರೀಕ್ಷಾ ವರದಿಯು ಪಾಸಿಟಿವ್​ ಬಂದಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​​ಗೆ ಕಳಿಸುವ ಮೂಲಕ ಸೋಂಕಿನ ತಳಿಯನ್ನು ಪತ್ತೆ ಮಾಡುವ ಕಾರ್ಯವನ್ನು ಮಾಡಲಾಗುತ್ತದೆ.

ಇದನ್ನು ಓದಿ : acid attack : ಆಸಿಡ್‌ ಪ್ರೇಮಿ ನಾಗೇಶ್‌ ಬಂಧನಕ್ಕೆ ಮೂರು ತಂಡ : #hangnagesh ಅಭಿಯಾನಕ್ಕೆ ಬಾರೀ ಬೆಂಬಲ

ಇದನ್ನೂ ಓದಿ : ice cream box : ಕಣ್ಣಾ ಮುಚ್ಚಾಲೆ ಆಡುತ್ತಾ ಐಸ್​ಕ್ರೀಂ ಬಾಕ್ಸಿನಲ್ಲಿ ಅವಿತುಕೊಳ್ಳಲು ಹೋದ ಬಾಲಕಿಯರು ಸಾವು

increase in covid 19 cases in the state guidelines issued by the government fo international travelers

Comments are closed.