ಸೋಮವಾರ, ಏಪ್ರಿಲ್ 28, 2025
HomekarnatakaJarakiholi controversy: 'ಹಿಂದೂ ಪದದ ಅರ್ಥ ಅಶ್ಲೀಲ' ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ; ತನಿಖಾ ತಂಡ...

Jarakiholi controversy: ‘ಹಿಂದೂ ಪದದ ಅರ್ಥ ಅಶ್ಲೀಲ’ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ; ತನಿಖಾ ತಂಡ ರಚನೆಗೆ ಸಿಎಂರಲ್ಲಿ ಮನವಿ

- Advertisement -

ಬೆಳಗಾವಿ: Jarakiholi controversy: ‘ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ’ ಎಂಬ ಶಾಸಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಅಲ್ಲದೇ ಈ ಬಗ್ಗೆ ತಂಡ ರಚನೆ ಮಾಡಿ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಅವರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: Nirav Modi: ನೀರವ್ ಮೋದಿ ಮೇಲ್ಮನವಿ ಅರ್ಜಿ ವಜಾ; ಭಾರತಕ್ಕೆ ಹಸ್ತಾಂತರಿಸುವಂತೆ ಬ್ರಿಟನ್ ಕೋರ್ಟ್ ಆದೇಶ

ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆ ತಮ್ಮ ಹೇಳಿಕೆಯನ್ನು ಸತೀಶ್ ಜಾರಕಿಗೊಳಿ ಹಿಂಪಡೆದಿದ್ದಾರೆ. ಈ ಬಗ್ಗೆ ಸಿಎಂಗೆ ಪತ್ರ ಬರೆದಿರುವ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ವಿಷಾದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮಾತ್ರವಲ್ಲದೇ ನನ್ನ ತೇಜೋವಧೆ, ನನಗೆ ಹಾನಿಯುಂಟು ಮಾಡಲು ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಅವರು ಆರೋಪಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಹೇಳಿಕೆಯನ್ನು ಹಿಂಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: PAK vs NZ T20 Semi-Final: ಟಿ20 ವಿಶ್ವಕಪ್ ಫೈನಲ್’ಗೆ ಪಾಕಿಸ್ತಾನ ಲಗ್ಗೆ, ಭಾನುವಾರ ನಡೆಯುತ್ತಾ ಭಾರತ Vs ಪಾಕ್ ಫೈನಲ್ ?

ಜಾರಕಿಹೊಳಿ ಬರೆದ ಪತ್ರದಲ್ಲೇನಿದೆ..?

‘ಹಿಂದೂ ಶಬ್ಧ ಪರ್ಶಿಯನ್ ಭಾಷೆಯಿಂದ ಬಂದಿದೆ. ಇದು ಭಾರತದ ದೇಶಕ್ಕೆ ಹೇಗೆ ಬಂತು..? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಅರ್ಥ ಕಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತ ಹೇಳಿರುತ್ತೇನೆ. ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಿರುವುದು ಬಹಳ ಅವಶ್ಯಕತೆ ಇದೆ ಎಂದು ಹೇಳಿರುತ್ತೇನೆ. ವಿಕಿಪಿಡಿಯಾ, ಪುಸ್ತಕಗಳು, ಶಬ್ಧಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಭಾಷಣ ಆಧಾರವಾಗಿರುತ್ತದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನ್ನ ತೇಜೋವಧೆ ಹಾಗೂ ಹಾನಿಯುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ವಿರುದ್ಧ ತಕ್ಷಣ ತನಿಖಾ ಸಮಿತಿ ರಚಿಸುವಂತೆ’ ಸತೀಶ್ ಜಾರಕಿಹೊಳಿ ಪತ್ರದ ಮೂಲಕ ಸಿಎಂಗೆ ವಿನಂತಿಸಿಕೊಂಡಿದ್ದಾರೆ.

Jarakiholi controversy: Satish Jarakiholi withdraws ‘Hindu word meaning obscene’ statement; Appeal to CM for formation of investigation team

RELATED ARTICLES

Most Popular