Kamegouda No More : ಮನ್  ಕೀ  ಬಾತ್ ನಲ್ಲಿ  ಪ್ರಧಾನಿ ಮೋದಿಯವರ ಮೆಚ್ಚುಗೆ ಪಡೆದಿದ್ದ ಮಂಡ್ಯದ ಕೆರೆ ಕಾಮೇಗೌಡ ಇನ್ನಿಲ್ಲ

ಮಂಡ್ಯ : Kamegouda No More ಆಧುನಿಕ ಭಗೀರಥ, ಪರಿಸರ ಪ್ರೇಮಿ ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಇಡೀ ರಾಜ್ಯ ಮತ್ತು ದೇಶದ ಗಮನದ ಸೆಳೆದೆ ಮಂಡ್ಯದ ಕೆರೆಗಳ ಶಿಲ್ಪಿ ಕಾಮೇಗೌಡರು ವಿಧಿವಶರಾಗಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ಅವರಿಗೆ 86 ವರ್ಷ ವಯಸ್ಸಾಗಿತ್ತು. ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಕಾಮೇಗೌಡರಿಗೆ ಕಳೆದ ರಾತ್ರಿ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇದಾದ ನಂತರ ವಾಂತಿಯನ್ನು ಮಾಡಿಕೊಂಡಿದ್ದಾರೆ. ಬಳಿಕ ಸೋಮವಾರ ಮನೆಯಲ್ಲಿ ಕಾಮೇಗೌಡರು ವಿಧಿವಶರಾಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ರಾಜ್ಯ ಸರ್ಕಾರ ಕಾಮೇಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಕಾಮೇಗೌಡರನ್ನು ಗೌರವಿಸಿತ್ತು.

ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. 16ಕೆರೆಗಳನ್ನ ನಿರ್ಮಿಸಿದ್ದ ಕಾಮೇಗೌಡರನ್ನ ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಶ್ಲಾಘಿಸಿದ್ರು. ಆಧುನಿಕ ಭಗೀರಥ ಹೊಗಳಿದ್ರು. ಇತ್ತೀಚೆಗೆ ಯೋಗ ದಿನಾಚರಣೆಗೆ ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಬೇಕೆಂದು ಕಾಮೇಗೌಡರು ಆಸೆ ವ್ಯಕ್ತಪಡಿಸಿದ್ರು. ಆದ್ರೆ ಅದು ಸಾಧ್ಯವಾಗಲೇ ಇಲ್ಲ.

ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಬಳಿಕ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ.ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

ಅನ್ನ ನೀರು ಬಿಟ್ಟಿದ್ದ ಕಾಮೇಗೌಡರು : ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಬೆನ್ನಲ್ಲೇ ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಕಾಮೇಗೌಡರಿಗೆ ಮನೆ, ಮಕ್ಕಳಿಗೆ ಉದ್ಯೋಗ, ಆರ್ಥಿಕ ನೆರವು ಭರವಸೆ ನೀಡಿದ್ದರು. ಆದ್ರೆ ಆ ಭರವಸೆಗಳು ಯಾವುವೂ ಈಡೇರಿಲಿಲ್ಲ. ಈ ಮಧ್ಯೆ ಕೆಲವರು ಕಾಮೇಗೌಡರ ವಿರುದ್ಧ ಮರಳು ಗಣಿಗಾರಿಕೆ ಆರೋಪವನ್ನು ಹೊರಿಸಿದ್ದರು. ಇದರಿಂದ ಇಳಿವಯಸ್ಸಿನಲ್ಲೂ ಗೌಡರಿಗೆ ತನಿಖೆ ಎದುರಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೇ ವೇಳೆ ತಮ್ಮ ಸಾಮಾಜಿಕ ಸೇವೆಗಳನ್ನು ಮುಂದುವರೆಸಲು ಕಾಮೇಗೌಡರಿಗೆ ಅಧಿಕಾರಿಗಳಿಂದ ಅಡ್ಡಿ ಆತಂಕಗಳು ಎದುರಾಗಿದ್ದವು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ತನೆಗೆ ಬೇಸತ್ತು ಕಾಮೇಗೌಡರು ಆಹಾರ ತ್ಯಜಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಗೌಡರನ್ನ ಮಳವಳ್ಳಿ ತಾಲೂಕು ಆಡಳಿತ ಆಸ್ಪತ್ರೆಗೂ ದಾಖಲಿಸಿತ್ತು.

ಇದನ್ನೂ ಓದಿ: Virat Kohli fitness report : ವಿರಾಟ್ ಕೊಹ್ಲಿ ಫಿಟ್ನೆಸ್ ‘ಕಿಂಗ್’, NCA ವರದಿಯಲ್ಲಿ ಕೊಹ್ಲಿ ಫಿಟ್ನೆಸ್ ಸೀಕ್ರೆಟ್ ರಿವೀಲ್

ಇದನ್ನೂ ಓದಿ: BJP MOCK RAHUL : ‘ಖತಂ.. ಟಾ ಟಾ ಬೈ ಬೈ’ ರಾಹುಲ್ ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ಲೇವಡಿ ಮಾಡಿದ್ದು ಹೀಗೆ

Kamegouda No More A modern Bhagirath, who caught the attention of the entire country through modi Mann Ki Baat has passed away

Comments are closed.