ಬೆಂಗಳೂರು : ಕೊರೊನಾ ವೈರಸ್ ಸೋಂಕು ಇಳಿಕೆ ಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ರಾಜ್ಯದ 16 ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ಆದೇಶ ಹೊರಡಿಸಲಾಗಿದೆ.
ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆ ಯಿಂದ ಸಂಜೆ 5 ಗಂಟೆಯ ವರಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಬಸ್ ಸಂಚಾರವೂ ಆರಂಭವಾಗಲಿದೆ. ಅಲ್ಲದೇ ಅನ್ ಲಾಕ್ 2.0 ಮಾರ್ಗಸೂಚಿಗಳು ಈ ಜಿಲ್ಲೆಗಳಿಗೆ ಅನ್ವಯವಾಗಲಿದೆ.
