ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿ ದಿದೆ. ರಾಜ್ಯದಲ್ಲಿ ಒಂದು ದಿನಲ್ಲಿ 35,024 ಹೊಸ ಕೊರೊನಾ ಸೋಂಕು ದೃಢಪಟ್ಟಿದ್ದು, ಬರೋಬ್ಬರಿ 270 ಮಂದಿಯನ್ನು ಬಲಿ ಪಡೆದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 19,637 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ 143 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು 3,49,496ಕ್ಕೆ ಜಿಗಿತ ಕಂಡಿದೆ. ಅಲ್ಲದೇ ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ 15,306 ಮಂದಿ ಸಾವನ್ನಪ್ಪಿದ್ದಾರೆ.

