Alcohol Ban : ಮದ್ಯ ಪ್ರಿಯರಿಗೆ ಬಿಗ್‌ ಶಾಕ್‌, ವೀಕೆಂಡ್‌ ಕರ್ಪ್ಯೂ ವೇಳೆ ಮದ್ಯದಂಗಡಿ ಬಂದ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಆರ್ಭಟ ಜೋರಾಗಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಿದೆ. ವೀಕೆಂಡ್‌ ಲಾಕ್‌ಡೌನ್‌ ಇದೀಗ ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟಿದ್ದು, ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್‌ (Alcohol Ban) ಮಾಡುವಂತೆ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ.

ಕೊರೊನಾ ವೈರಸ್‌ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಈಗಾಗಲೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಬಾರ್‌, ಪಬ್‌, ಮದ್ಯದಂಗಡಿಗಳಲ್ಲಿ ಶೇ.೫೦ರಷ್ಟು ಮಂದಿ ಮಾತ್ರವೇ ಅವಕಾಶ ಕಲ್ಪಿಸಿದೆ. ಇದರ ಬೆನ್ನಲ್ಲೇ ವೀಕೆಂಡ್‌ ಕರ್ಪ್ಯೂ ವೇಳೆಯಲ್ಲಿ ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್‌ ಮಾಡುವಂತೆ ಅಬಕಾರಿ ಇಲಾಖೆ ಈಗಾಗಲೇ ಮದ್ಯದಂಗಡಿಗಳ ಮಾಲೀಕರಿಗೆ ಸೂಚನೆಯನ್ನು ನೀಡಿದೆ. ರಾಜ್ಯ ಸರಕಾರದ ಆದೇಶ ಪಾಲನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಅಪರ ಮುಖ್ಯ ಆಯುಕ್ತ ರಾಜೇಂದ್ರ ಪ್ರಸಾದ್‌ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ಕೊರೊನಾ ಮೊದಲ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ಮದ್ಯ ಮಾರಾಟಕ್ಕೆ ಬ್ರೇಕ್‌ ಬಿದ್ದಿತ್ತು. ಆದ್ರೆ ನಂತರದಲ್ಲಿ ಬೆಳಗಿನ ವೇಳೆಯಲ್ಲಿ ವೈನ್‌ ಶಾಪ್‌ಗಳ ಮೂಲಕ ಮದ್ಯ ಖರೀದಿಗೆ ಅವಕಾಶವನ್ನು ರಾಜ್ಯ ಸರಕಾರ ಕಲ್ಪಿಸಿತ್ತು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಬಾರ್‌, ಪಬ್‌, ವೈನ್‌ ಸ್ಟೋರ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದ್ದವು. ಆದರೆ ಕೆಲವೇ ತಿಂಗಳಲ್ಲೇ ಮತ್ತೆ ಮದ್ಯ ಪ್ರಿಯರು ಹಾಗೂ ಮಾರಾಟಗಾರರಿಗೆ ಸರಕಾರ ಶಾಕ್‌ ಕೊಟ್ಟಿದೆ. ರಾಜ್ಯದಲ್ಲಿ ಸದ್ಯ ಎರಡು ವಾರಗಳ ಕಾಲ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ಸಂಜೆಯಿಂದ ರಾಜ್ಯ ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗಿನ ವರೆಗೂ ಕರ್ನಾಟಕ ಬಂದ್‌ ಆಗಲಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್‌ ಕರ್ಪ್ಯೂ ಜಾರಿಯಲ್ಲಿರಲಿದೆ. ಇ ವೇಳೆಯಲ್ಲಿ ಬಾರ್‌, ಪಬ್‌, ವೈನ್‌ ಶಾಪ್‌ಗಳು ಸಂಪೂರ್ಣವಾಗಿ ಬಂದ್‌ ಆಗಲಿವೆ.

ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ: ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಓಮಿಕ್ರಾನ್​ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕೋವಿಡ್​ ಸೋಂಕು ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋದರಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಆದೇಶಗಳನ್ನು ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಗೆ ಆರಂಭವಾಗಲಿರುವ ವೀಕೆಂಡ್​ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಇರಲಿದೆ. ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಹಾಗಾದರೆ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಯಾವೆಲ್ಲ ಸೇವೆಗಳಿಗೆ ನಿರ್ಬಂಧವಿದೆ. ಹಾಗೂ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶವಿದೆ ಎಂಬುದಕ್ಕೆ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ :

  • ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳು, ತುರ್ತು ಸೇವೆಗಳು , ಕೊರೊನಾ ನಿರ್ವಹಣೆಗೆ ಸಂಬಂಧಿಸಿದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸಲಿವೆ.
  • ಐಟಿ ಹಾಗೂ ಕೈಗಾರಿಕಾ ವಲಯಗಳಿಗೆ ಕರ್ಫ್ಯೂ ಅವಧಿಯಲ್ಲಿ ನಿರ್ಬಂಧ ಇರುವುದಿಲ್ಲ. ಕಂಪನಿಯ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ.
  • ರೋಗಿಗಳು ಹಾಗೂ ಅವರ ಸಂಬಂಧಿಗಳು, ಲಸಿಕೆ ತೆಗೆದುಕೊಳ್ಳುವವರು ತುರ್ತು ಸೇವೆಗಳ ಅಗತ್ಯ ಇರುವವರು ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಓಡಾಟ ನಡೆಸಬಹುದಾಗಿದೆ.
  • ಹಣ್ಣು ಹಾಗೂ ತರಕಾರಿ ಅಂಗಡಿ, ಡೈರಿ ಉತ್ಪನ್ನಗಳು, ದಿನಸಿ ಅಂಗಡಿಗಳು,ಮೀನು ಹಾಗೂ ಮಾಂಸದ ಅಂಗಡಿ, ಪ್ರಾಣಿಗಳಿಗೆ ಸಂಬಂಧಿಸಿದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
  • ಬೀದಿ ಬದಿ ವ್ಯಾಪಾರಿಗಳೂ ಎಂದಿನಂತೆ ವ್ಯಾಪಾರ ವ್ಯವಹಾರ ನಡೆಸಬಹುದು. ನ್ಯಾಯಬೆಲೆ ಅಂಗಡಿಗಳೂ ಈ ಅವಧಿಯಲ್ಲಿ ತೆರೆಯಲಿವೆ.
  • ಹೋಂ ಡೆಲಿವರಿ ಪಡೆಯುವವರಿಗೆ ಮುಕ್ತ ಅವಕಾಶ ಇರಲಿದೆ. ರೆಸ್ಟಾರೆಂಟ್​ ಹಾಗೂ ಹೋಟೆಲ್​ಗಳಲ್ಲಿ ಪಾರ್ಸಲ್​ ಮಾತ್ರ ಪಡೆಯಬಹುದು.
  • ವಿರಳ ಸಂಖ್ಯೆಯಲ್ಲಿ ಬಸ್​ ಸೇವೆ, ರೈಲು ಸೇವೆ ಹಾಗೂ ವಿಮಾನ ಸೇವೆ ಕೂಡ ಇರಲಿದೆ. ಖಾಸಗಿ ವಾಹನಗಳು ಹಾಗೂ ಟ್ಯಾಕ್ಸಿಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ.
  • ಪ್ರಯಾಣಿಕರು ತಮ್ಮ ಟಿಕೆಟ್​ನ್ನು ತೋರಿಸುವ ಮೂಲಕ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್​ ನಿಲ್ದಾಣಗಳಿಗೆ ಸಂಚರಿಸಬಹುದಾಗಿದೆ.
  • ಮೆಟ್ರೋ ಪ್ರಯಾಣದ ಸಮಯದಲ್ಲಿ ಪರಿಷ್ಕರಣೆ ಮಾಡಲಾಗುವುದು.
  • ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಮದುವೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಚರಿಸಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ ಉದ್ಯಾನವಗಳು ಬಂದ್​ ಇರಲಿವೆ.

(Alcohol Lovers Big Shock and Weekend Curfew time Alcohol Ban)

Comments are closed.