ಮಂಗಳವಾರ, ಏಪ್ರಿಲ್ 29, 2025
HomekarnatakaAnti Conversion Law : ಶೀಘ್ರದಲ್ಲಿಯೇ ಮತಾಂತರ ವಿರೋಧ ಕಾನೂನು ಜಾರಿ : ಸಿಎಂ ಬೊಮ್ಮಾಯಿ

Anti Conversion Law : ಶೀಘ್ರದಲ್ಲಿಯೇ ಮತಾಂತರ ವಿರೋಧ ಕಾನೂನು ಜಾರಿ : ಸಿಎಂ ಬೊಮ್ಮಾಯಿ

- Advertisement -

ಬೆಂಗಳೂರು : ರಾಜ್ಯದಲ್ಲಿ ಮತಾಂತರದ ಆರೋಪ ಕೇಳಿಬರುತ್ತಿದೆ. ಬಿಜೆಪಿ ಶಾಸಕರೇ ಮತಾಂತರ ನಡೆಯುತ್ತಿರುವ ಆರೋಪ ಮಾಡುತ್ತಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿಯೂ ಮತಾಂತರ ವಿಚಾರ ಪ್ರಸ್ತಾಪವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಶೀಘ್ರದಲ್ಲಿಯೇ ಮತಾಂತರ ವಿರೋಧಿ ಕಾನೂನು (Anti Conversion Law) ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಾಂತರ ವಿರೋಧಿ ಕಾಯಿದೆ ಜಾರಿಗೆ ತರುವ ಕುರಿತು ಹಲವು ಮಠಾಧೀಶರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆಮಿಷವೊಡ್ಡಿ ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಇತರ ರಾಜ್ಯಗಳಲ್ಲಿ ಜಾರಿಗೆ ತಂದಿರುವ ಕಾನೂನಿನ ಕುರಿತು ಅಧ್ಯಯನವನ್ನು ನಡೆಸಿದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಜಾರಿಗೆ ತರಲಾಗುತ್ತದೆ ಎಂದಿದ್ದಾರೆ.

ಈಗಾಗಲೇ ಸಾಕಷ್ಟು ಮಂದಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿನ ಬಹುತೇಕ ಶಾಸಕರು ಕೂಡ ಮಂತಾಂತರ ವಿರೋಧಿ ಕಾಯಿದೆ ಜಾರಿಗೆ ತರುವಂತೆ ಒತ್ತಡವನ್ನು ಹೇರುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

( Anti Conversion Law enforcement in Karnataka: CM Basavarj Bommai )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular