ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar Resigns) ಅವರು ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಇದರ ಬೆನ್ನಲ್ಲೇ ಪಕ್ಷೇತರರಾಗಿ ಕಣಕ್ಕೆ ಇಳಿಯುವುದಾಗಿ ಅವರು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ರಾಜಿ ಸಂಧಾನಕ್ಕೆ ಮುಂದಾಗಿತ್ತು. ರಾಜ್ಯಸಭಾ ಸದಸ್ಯರನ್ನಾಗಿ ಮಾಡುವ ಮೂಲಕ ಅವರಿಗೆ ರಾಷ್ಟ್ರಮಟ್ಟದಲ್ಲಿ ಉನ್ನತ ಹುದ್ದೆಗಳನ್ನು ನೀಡುವುದಾಗಿ ಬಿಜೆಪಿ ಹೈಕಮಾಂಡ್ ಆಫರ್ ನೀಡಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಖುದ್ದು ಮಾತುಕತೆ ನಡೆಸಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.
ಆರು ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಪಕ್ಷ ಮುಖ್ಯಮಂತ್ರಿ ಹುದ್ದೆಯನ್ನೂ ನೀಡಿತ್ತು. ಅಲ್ಲದೇ ರಾಜ್ಯಪಾಲ ಹುದ್ದೆ ನೀಡುವ ಆಫರ್ ನೀಡಿತ್ತು. ಆದ್ರೆ ಇದ್ಯಾವುದಕ್ಕೂ ಬಗ್ಗದ ಜಗದೀಶ್ ಶೆಟ್ಟರ್ ಕಮಲ ಪಾಳಯವನ್ನು ತೊರೆದಿದ್ದಾರೆ. ತಮ್ಮ ವಿರುದ್ದ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ನನಗೆ ಅವಮಾನ ಮಾಡಲಾಗಿದೆ. ಇದರಿಂದಾಗಿ ನಾನು ಅಸಮಾಧಾನಗೊಂಡಿದ್ದೇನೆ. ನನಗೆ ಆಗಿರುವ ಅವಮಾನದ ಹಿನ್ನೆಲೆಯಲ್ಲಿ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದೇನೆ. ಇಂದು ಶಿರಸಿಗೆ ಹೋಗಿ ವಿಧಾನಸಭೆಗೆ ನನ್ನ ರಾಜೀನಾಮೆಯನ್ನು (ಸ್ಪೀಕರ್‌ಗೆ ಸಲ್ಲಿಸಿ) ಅಂತಿಮವಾಗಿ ನಾನು ರಾಜ್ಯದಲ್ಲಿ ಕಟ್ಟಿದ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ. ತಮ್ಮ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ ಎಂದೂ ಲಿಂಗಾಯತ ಮುಖಂಡ ಆರೋಪಿಸಿದ್ದಾರೆ. ಇದನ್ನೂ ಓದಿ : JDS Election Manifesto : ಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಏನೆಲ್ಲಾ ಭರವಸೆಗಳಿವೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಟಿಕೆಟ್ ಲಭಿಸದ ಹಿನ್ನೆಲೆಯಲ್ಲಿ ಈಗಾಗಲೇ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಇದೀಗ ಜಗದೀಶ್ ಶೆಟ್ಟರ್ ಅವರ ಹಾದಿಯನ್ನೇ ರಾಮದಾಸ್, ನೆಹರೂ ಓಲೆಕಾರ್ ಅವರು ಕೂಡ ಹಿಡಿಯುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಚುನಾವಣೆಯ ಹೊತ್ತಲ್ಲೇ ಹಿರಿಯ ನಾಯಕರು ಪಕ್ಷ ತೊರೆಯುತ್ತಿರುವುದು ಬಿಜೆಪಿ ಪಕ್ಷವನ್ನು ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದನ್ನೂ ಓದಿ : ಬಿಜೆಪಿ ಕೈಕೊಟ್ಟ ಲಕ್ಷ್ಮಣ್ ಸವದಿಗೆ ಅಥಣಿಯಿಂದಲೇ ಕಾಂಗ್ರೆಸ್ ಟಿಕೆಟ್