Karnataka Assembly Election : ಬಿಜೆಪಿ 2ನೇ ಪಟ್ಟಿ ಪ್ರಕಟ – ಬೈಂದೂರಿಗೆ ಗುರುರಾಜ್‌ ಗಂಟಿಹೊಳೆ, ಮಾಡಾಳು ಪುತ್ರನಿಗೆ ನಿರಾಸೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 189 ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಇದೀಗ ಎರಡನೇ ಪಟ್ಟಿಯಲ್ಲಿ ಒಟ್ಟು 23 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಲಂಚ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೆನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರನಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಲು ನಿರಾಕರಿಸಿದೆ. ಇದೀಗ ಚೆನ್ನಗಿರಿ ಕ್ಷೇತ್ರದಿಂದ ಶಿವಕುಮಾರ್‌ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಹಾಲಿ ಶಾಸಕ ಸುಕುಮಾರ್‌ ಶೆಟ್ಟಿ ಅವರಿಗೆ ಕೋಕ್‌ ನೀಡಲಾಗಿದ್ದು, ಆರ್‌ಎಸ್‌ಎಸ್‌ ಮುಖಂಡ ಗುರುರಾಜ್‌ ಗಂಟಿಹೊಳೆ ಅವರಿಗೆ ಟಿಕೆಟ್‌ ನೀಡಲಾಗಿದೆ.

Karnataka Assembly Election : ಎರಡನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್ ?

ದೇವರ್ ಹಿಪ್ಪರಗಿ – ಸೋಮನಗೌಡ ಪಾಟೀಲ್ (ಸಾಸನೂರು)

ಬಸವನ ಬಾಗೇವಾಡಿ – ಎಸ್​ಕೆ ಬೆಳ್ಳುಬ್ಬಿ

ಇಂಡಿ – ಕಾಸಗೌಡ ಬಿರದಾರ್

ಗುರುಮಿಟ್ಕಲ್ – ಲಲಿತ ಅನಾಪುರ್

ಬೀದರ್ – ಈಶ್ವರ್ ಸಿಂಗ್ ಠಾಕೂರ್

ಬಾಲ್ಕಿ- ಪ್ರಕಾಶ್ ಖಂಡ್ರೆ

ಗಂಗಾವತಿ – ಪ್ರಸನ್ನ ಮುನವಳ್ಳಿ

ಕಲಘಟಗಿ – ನಾಗರಾಜ್ ಛಬ್ಬಿ

ಹಾನಗಲ್ – ಶಿವರಾಜ್ ಸಜ್ಜನರ್

ಹಾವೇರಿ (ಎಸ್​ಸಿ) – ಗವಿಸಿದ್ದಪ್ಪ ದ್ಯಾಮಣ್ಣನವರ್

ಹರಪ್ಪನಹಳ್ಳಿ – ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ – ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ – ಅಜಯ್ ಕುಮಾರ್

ಮಾಯಕೊಂಡ (ಎಸ್​ಸಿ) – ಬಸವರಾಜ ನಾಯ್ಕ್

ಚನ್ನಗಿರಿ – ಶಿವಕುಮಾರ್

ಬೈಂದೂರು – ಗುರುರಾಜ್ ಗಂಟಿಹೊಳೆ

ಮೂಡಿಗೆರೆ (ಎಸ್​ಸಿ) – ದೀಪಕ್ ದೊಡ್ಡಯ್ಯ

ಗುಬ್ಬಿ – ಎಸ್​ಡಿ ದಿಲೀಪ್ ಕುಮಾರ್

ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಿದೆ. ಇದರಿಂದಾಗಿ ಬಿಜೆಪಿಯಲ್ಲಿ ಭಿನ್ನಮತ ಏರ್ಪಟ್ಟಿದೆ. ಮೊದಲ ಪಟ್ಟಿಯಲ್ಲಿ ಕರಾವಳಿ ಭಾಗದಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಸುಕುಮಾರ್‌ ಶೆಟ್ಟಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದು, ಗುರುರಾಜ್‌ ಗಂಟಿಹೊಳೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯ ಕಾರ್ಕಳ ಹೊರತು ಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದನ್ನೂ ಓದಿ : Karnataka Assembly Election 2023 : ಚುನಾವಣೆ ಜಿದ್ದಾಜಿದ್ದಿ ನಡುವೆ ಸಾಮಾಜಿಕ ಜಾಲತಾಣದಲ್ಲಿ ಬಿಎಸ್‌ವೈ, ಈಶ್ವರಪ್ಪ ಫೋಟೋ ವೈರಲ್‌

ಮೊದಲ ಪಟ್ಟಿಯಲ್ಲಿ 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದ್ದು, ಈ ಪೈಕಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಒಬಿಸಿಯ 32, ಎಸ್​ಸಿ 30, ಎಸ್​ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿತ್ತು. 8 ಮಂದಿ ಮಹಿಳೆಯರು, ಐವರು ವಕೀಲರು, ಮೂವರು ಶಿಕ್ಷಕರು, 9 ಸ್ನಾತಕೋತ್ತರ ಪದವೀಧರರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ನೀಡಿದೆ. ಇದನ್ನೂ ಓದಿ : ಕೈ ತೊರೆದು ಕಮಲ ಹಿಡಿದ ಕಾಗೋಡು ಪುತ್ರಿ : ಬೇಳೂರಿಗೆ ಸಂಕಟ ತಂದ ಬಂಡಾಯ

Comments are closed.