ಬೆಂಗಳೂರು : ಕಾವೇರಿ ನದಿ ನೀರು (Cauvery Water ) ಬಿಟ್ಟಿರುವ ಕಾಂಗ್ರೆಸ್ ಸರಕಾರದ (Karnataka Congress Government) ವಿರುದ್ದ ರೈತರು, ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ (Karnataka Bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ (Schools and College Holiday) ಮಾಡಲಾಗಿದೆ. ಆದರೆ ಕರಾವಳಿ ಜಿಲ್ಲೆಗಳಿಗೆ ಮಾತ್ರ ಬಂದ್ ಬಿಸಿ ತಟ್ಟಿಲ್ಲ.
ಕಾವೇರಿ ನೀರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸುಮಾರು 1900ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗ್ಗೆ6 ಗಂಟೆಯಿಂದಲೇ ಕರ್ನಾಟಕ ಬಂದ್ ಆರಂಭಗೊಂಡಿದ್ದು, ಸಂಜೆ 6 ಗಂಟೆಯ ವರೆಗೂ ಬಂದ್ ನಡೆಯಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ :
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ. ದೇವನಹಳ್ಳಿಯ ಬಳಿಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿಯಲ್ಲಿ ಕರವೇ ಕಾರ್ಯಕರ್ತರು ಕನ್ನಡ ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೈ ಕೊಯ್ದುಕೊಂಡು ಪ್ರತಿಭಟನೆ :
ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯದಲ್ಲಿ ಕಸ್ತೂರಿನ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಕಾರ್ಯಕರ್ತರಲ್ಲಿ ಗಾಯಮಾಡಿಕೊಂಡು ಪ್ರತಿಭಟನೆ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಬಂದ್ ಏನೆಲ್ಲಾ ಇರಲ್ಲ ?
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೋಟೆಲ್, ಬೇಕರಿ, ಚಿತ್ರಮಂದಿರಗಳು ಬಂದ್ ಆಗಿರಲಿವೆ. ಓಲಾ, ಊಬರ್, ಆಟೋ ಕ್ಯಾಬ್, ಗೂಡ್ಸ್ ವಾಹನ, ಲಾರಿಗಳ ಸಂಚಾರ ಇರುವುದಿಲ್ಲ. ಜ್ಯುವೆಲ್ಲರಿ ಶಾಪ್, ಜಿಪ್, ಬೀದಿಬದಿ ವ್ಯಾಪಾರ, ಪಡಿತರ ಅಂಗಡಿ, ಶಾಪಿಂಗ್ ಮಾಲ್, ಮಾರುಕಟ್ಟೆಗಳು ಮುಚ್ಚಲಿವೆ.

ಇದನ್ನೂ ಓದಿ : ನಾಳೆ ಕರ್ನಾಟಕ ಬಂದ್ ಗೆ 1900 ಸಂಘಟನೆಗಳ ಬೆಂಬಲ : ಆಟೋ, ಬಸ್ ಸಂಚಾರ ಇಲ್ಲ, ಬೆಂಗಳೂರಲ್ಲಿ ನಿಷೇಧಾಜ್ಞೆ
ಯಾವ ಸೇವೆಗಳು ಇರುತ್ತೆ ?
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ವ್ಯತ್ಯಯವಾಗಲಿದೆ. ಆದರೆ ಅಗತ್ಯಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಅಂಬ್ಯುಲೆನ್ಸ್, ತರಕಾರಿ ಅಂಗಡಿ, ಹಾಲಿನ ಬೂತ್, ಪೆಟ್ರೋಲ್ ಬಂಕ್, ಬ್ಯಾಂಕಿಂಗ್ ಸೇವೆ, ಎಪಿಎಂಸಿಗಳು ಎಂದಿನಂತೆ ಬಾಗಿಲು ತೆರೆಯಲಿವೆ.
ಬೆಂಗಳೂರಲ್ಲಿ ಮೆಟ್ರೋ ಸಂಚಾರ :
ಇನ್ನು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದ್ದರೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೆಟ್ರೋ ರೈಲುಗಳು ಎಂದಿನಂತೆಯೇ ಸಂಚಾರ ನಡೆಸಲಿವೆ.
ಹಸಿರು ಮಾರ್ಗದ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ಡಾಣದ ವರೆಗೆ ಮೆಟ್ರೋ ರೈಲು ಸೇವೆ ಬಂದ್ ಆಗಿರಲಿದೆ. ಈಗಾಗಲೇ ಕೃಷ್ಣರಾಜಪುರದಿಂದ ಗರುಡಾಚಾರ್ ಪಾಳ್ಯದ ವರೆಗೆ ಮೆಟ್ರೋಲ್ ಸೇವೆ ಈಗಾಗಲೇ ಬಂದ್ ಆಗಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ :
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ ಹಾಸನ ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರವೇ ರಜೆ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಕೋಟದಲ್ಲಿ ಲಾರಿ ಚಾಲಕರು, ಮಾಲೀಕರ ಮುಷ್ಕರ : ಜಿಲ್ಲಾಡಳಿತ ವಿರುದ್ದ ತೀವ್ರ ಆಕ್ರೋಶ
ಮೈಸೂರ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಬಿಸಿ ಜೋರಾಗಿಯೇ ತಟ್ಟಿದ್ದು, ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಚಾಮಗರಾಜನಗರ ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ರಜೆ ಘೋಷಣೆ ಮಾಡಿದ್ದರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಜೊತೆಗೆ ಬಂದ್ ಬಿಸಿ ಅಷ್ಟಾಗಿ ತಟ್ಟುವ ಲಕ್ಷಣಗಳು ಗೋಚರಿಸುತ್ತಿಲ್ಲ.
ಕರಾವಳಿಗೆ ತಟ್ಟದ ಬಂದ್ ಬಿಸಿ :
ಇನ್ನು ಕರ್ನಾಟಕ ಬಂದ್ ಬಿಸಿ ಇದೀಗ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅಷ್ಟಾಗಿ ತಟ್ಟಿಲ್ಲ. ಎರಡೂ ಜಿಲ್ಲೆಗಳಲ್ಲಿಯೂ ಯಾವುದೇ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ಸೂಚಿಸಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಶಾಲೆಗಳಿಗೆ ರಜೆ ಇಲ್ಲಾ ಎಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಬಸ್ ಸಂಚಾರ ಎಂದಿನಂತೆಯೇ ಇದ್ದು, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ.
Karnataka Bandh Live Updates Cauvery Water Dispute Schools Holiday bus bandh