ಬೆಂಗಳೂರು : ಕರ್ನಾಟಕ ಬಿಜೆಪಿಯಲ್ಲಿ ಬಾರೀ ಬೆಳವಣಿಗೆಯೊಂದು ನಡೆದಿದೆ. ಹಿಂದೂ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರನ್ನು 6 ವರ್ಷಗಳ ಉಚ್ಚಾಟನೆ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಈ ಕ್ರಮವನ್ನು ಕೈಗೊಂಡಿದೆ.
ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಅವರು ವಾಗ್ದಾಳಿಯನ್ನು ನಡೆಸುತ್ತಿದ್ದರು. ಪಕ್ಷಕ್ಕೆ ವಿರುದ್ದವಾಗಿ ರೆಬೆಲ್ ಶಾಸಕರನ್ನು ಕಟ್ಟಿಕೊಂಡ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಈ ಕ್ರಮಕೈಗೊಂಡಿದೆ.
Also Read : PhonePe, Paytm, Google Pay: ಏಪ್ರಿಲ್ 1 ರಿಂದ UPI ನಿಯಮದಲ್ಲಿ ಬದಲಾವಣೆ
ರಾಜ್ಯ ಬಿಜೆಪಿ ರೆಬೆಲ್ಸ್ ಟೀಂ ಕಟ್ಟಿಕೊಂಡು ಬಸನಗೌಡ ಪಾಟೀಲ್ ಯತ್ನಾಳ್ ಅವರು 10ಕ್ಕೂ ಅಧಿಕ ಬಾರಿ ಸಭೆಯನ್ನು ನಡೆಸಿದ್ದರು. ಅಲ್ಲದೇ ವಕ್ಪ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಹೋರಾಟವನ್ನು ನಡೆಸಿದ್ದರು. ಕಳೆದ ಒಂದು ತಿಂಗಳ ಹಿಂದೆಯೇ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲಾಗಿತ್ತು.
ಆದರೆ ಇದೀಗ ಏಕಾಏಕಿಯಾಗಿ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಸಕ್ಕರೆ ಕಾರ್ಖಾನೆಯ ಉದ್ಘಾಟನೆಗೆ ಬಿಜೆಪಿ ನಾಯಕರನ್ನು ಆಹ್ವಾನಿಸಲು ದೆಹಲಿಗೆ ತೆರಳಿದ್ದ ವೇಳೆಯಲ್ಲಿಯೇ ಯತ್ನಾಳ್ ಅವರನ್ನು ಉಚ್ಚಾಟಿಸುವ ಆದೇಶ ಹೊರಬಿದ್ದಿದೆ.
Also Read : 50 ರೂ. ಹೂಡಿಕೆ ಮಾಡಿ 35 ಲಕ್ಷ ರೂ. ಪಡೆಯಿರಿ : ಅಂಚೆ ಇಲಾಖೆಯ ಗ್ರಾಮ ಸುರಕ್ಷಾ ಯೋಜನೆ
ಇನ್ನೊಂದೆಡೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೂಡ ದೆಹಲಿಗೆ ತೆರಳಿದ್ದರು. ಬಿಜೆಪಿ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರವಲ್ಲ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಕೆಲವು ವರ್ಷಗಳಿಂದಲೂ ಬಿಜೆಪಿಗೆ ಮುಜುಗರ ತರುವ ಕಾರ್ಯವನ್ನು ಮಾಡುತ್ತಲೇ ಇದ್ದರು. ಯತ್ನಾಳ್ ಅವರು ಬಿಎಸ್ ಯಡಿಯೂರಪ್ಪ ವಿರುದ್ದ ಹರಿಹಾಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖುದ್ದು ಯತ್ನಾಳ್ ಅವರನ್ನು ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದರು. ಆದರೆ ಯತ್ನಾಳ್ ಇದಕ್ಕೆ ಅವಕಾಶವನ್ನೇ ನೀಡಲಿಲ್ಲ.
ಈ ಘಟನೆ ನಡೆಯುತ್ತಲೇ ಯತ್ನಾಳ್ ಹಾಗೂ ವಿಜಯೇಂದ್ರ ವಿರುದ್ದ ಮುಸುಕಿನ ಗುದ್ದಾಟ ಜೋರಾಗಿತ್ತು. ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ದ ಇದೀಗ ಬಿಜೆಪಿ ಶಿಸ್ತುಕ್ರಮವನ್ನು ಕೈಗೊಳ್ಳಲಾಗಿದೆ. ಬಿಜೆಪಿಯ ಕೆಲವು ನಾಯಕರಿಗೂ ನೋಟಿಸ್ ನೀಡಲಾಗಿದ್ದು, ಯತ್ನಾಳ್ ಅವರ ಮಾದರಿಯಲ್ಲೇ ಇತರರ ವಿರುದ್ದವೂ ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆಯಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ದ ಪಕ್ಷ ಶಿಸ್ತುಕ್ರಮಕೈಗೊಳ್ಳುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಅವರ ವಿರುದ್ದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
Karnataka BJP MLA Basangouda Patil Yatnal expelled from BJP next 6 years In Kannada News