Karnataka Budget 2023 : ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಘೋಷಣೆ : ಕೊಟ್ಟ ಮಾತು ಉಳಿಸಿಕೊಂಡ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು : ರಾಜ್ಯ ಸರಕಾರ ಆರೋಗ್ಯ ಇಲಾಖೆಗೆ (Karnataka Budget 2023 ) ಸಾಕಷ್ಟು ಅನುದಾನವನ್ನು ನೀಡಿದೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಗಮನ ಸೆಳೆದಿರುವುದು ಕನಕಪುರದ ಮೆಡಿಕಲ್‌ ಕಾಲೇಜು ಘೋಷಣೆ. ಡಿಸಿಎಂ ಡಿಕೆ ಶಿವಕುಮಾರ್‌ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಮಾಜಿ ಆರೋಗ್ಯ ಸಚಿವ ಸುಧಾಕರ್‌ ವಿರುದ್ದ ಸೇಡು ತಿರಿಸಿಕೊಂಡಿದ್ದಾರೆ.

ಈ ಹಿಂದಿನ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿತ್ತು. ಆದರೆ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಕೊಂಡೊಯ್ದಿದ್ದರು. ಅಲ್ಲದೇ ಕನಕಪುರ ಮೆಡಿಕಲ್‌ ಕಾಲೇಜು ನಿರ್ಮಾಣವನ್ನು ತಡೆಹಿಡಿಯಲಾಗಿತ್ತು. ಆದರೆ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ್ರೆ ಮೆಡಿಕಲ್‌ ಕಾಲೇಜು ನಿರ್ಮಾಣದ ಕುರಿತು ಡಿಕೆ ಶಿವಕುಮಾರ್‌ ಮಾತುಕೊಟ್ಟಿದ್ದರು.

ಇದನ್ನೂ ಓದಿ : Karnataka Budget 2023 : ಪಠ್ಯ ಪರಿಷ್ಕರಣೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆರಡು ದಿನ ಮೊಟ್ಟೆ : ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು ?

ಇದನ್ನೂ ಓದಿ : Karnataka Budget 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ?

ಇದೀಗ ತಮ್ಮದೇ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಸರಕಾರದ ಅವಧಿಯಲ್ಲಿಯೇ ಮಡಿಕಲ್‌ ಕಾಲೇಜು ನಿರ್ಮಾಣದ ಕುರಿತು ಡಿಕೆಶಿ ಸಾಕಷ್ಟು ಹೋರಾಟವನ್ನು ನಡೆಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕನಕಪುರ ಮೆಡಿಕಲ್‌ ಕಾಲೇಜು ಘೋಷಣೆಯ ಮೂಲಕ ತಾವು ಹಿಡಿದ ಕಾರ್ಯವನ್ನು ಪಟ್ಟುಬಿಡದೆ ಮಾಡಿ ಮುಗಿಸಿದ್ದಾರೆ.

Karnataka Budget 2023: Announcement of Medical College for Kanakapura: DCM DK Shivakumar kept his promise

Comments are closed.