Karnataka Budget 2023 : ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಾಸ್‌

ಬೆಂಗಳೂರು : Karnataka Budget 2023 : ಈ ಹಿಂದಿನ ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಆದರೆ ಕಾಂಗ್ರೆಸ್‌ ಸರಕಾರಕ್ಕೆ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಎಪಿಎಂಸಿ ಕಾಯ್ದೆಯನ್ನು ವಾಪಾಸ್‌ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎಪಿಎಂಸಿಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿದ್ದು, 2022-23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ : Karnataka Budget 2023 : ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ಸಾಲ

ಇದನ್ನೂ ಓದಿ : Karnataka Budget 2023 : ಮೀನುಗಾರರಿಗೆ ಗುಡ್‌ ನ್ಯೂಸ್‌ : ಬಡ್ಡಿರಹಿತ ಸಾಲ 3 ಲಕ್ಷ ರೂ.ಕ್ಕೆ ಏರಿಕೆ

ಇನ್ನು ರೈತರ ಅನುಕೂಲಕ್ಕಾಗಿ ಕಾಯಕ ನಿಧಿ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.

Karnataka Budget 2023: APMC Act Amendment Returned

Comments are closed.